Featured

ಜಮ್ಮು- ಕಾಶ್ಮೀರದಲ್ಲಿ ಬೃಹತ್‌ ಫಿಲ್ಮ್‌ ಸಿಟಿ ಆರಂಭಿಸಲು ಮುಂದಾದ ಕರಾವಳಿ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ -Vishwanews24

ಮಂಗಳೂರು:ಜಮ್ಮು- ಕಾಶ್ಮೀರದಲ್ಲಿ ಅನ್ಯ ರಾಜ್ಯದವರು ಆಸ್ತಿ ಖರೀದಿಸಲು ಇದ್ದ ನಿಷೇಧ ತೆರವುಗೊಳಿಸಿರುವ ಹಿನ್ನೆಲ್ಲೆಯಲ್ಲಿಕರಾವಳಿ ಮೂಲದ ದುಬೈ ಉದ್ಯಮಿ  ಬಿ.ಆರ್‌. ಶೆಟ್ಟಿಜಮ್ಮು- ಕಾಶ್ಮೀರದಲ್ಲಿ ಬೃಹತ್‌ ಫಿಲ್ಮ್‌ ಸಿಟಿಯೊಂದನ್ನು ಆರಂಭಿಸಲು ಉದ್ದೇಶಿಸಿದ್ದಾರೆ.

ಅರಬ್‌ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಬಿ.ಆರ್‌.ಶೆಟ್ಟಿ, ‘ಜಮ್ಮು- ಕಾಶ್ಮೀರ ಅತ್ಯಂತ ರಮಣೀಯ ಸ್ಥಳವಾಗಿದ್ದು, ನಾನು ಅಲ್ಲಿ ಫಿಲ್ಮ್‌ ಸಿಟಿಯೊಂದನ್ನು ಆರಂಭಿಸಲಿದ್ದೇನೆ. ಜನರು ಅಲ್ಲಿಗೆ ಬಂದು ಚಿತ್ರಗಳನ್ನು ಚಿತ್ರೀಕರಿಸಬಹುದು. ನನಗೆ ಈಗಾಗಲೇ ಜಮ್ಮು- ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸುಮಾರು 3,000 ಎಕರೆಯಷ್ಟುಜಾಗ ನೀಡುವುದಾಗಿ ಆಫರ್‌ಗಳು ಬಂದಿವೆ’ ಎಂದು ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಮ್ಮು- ಕಾಶ್ಮೀರದಲ್ಲಿ 7 ಸಾವಿರ ಕೋಟಿ ರು. ಹೂಡಿಕೆ ಮಾಡುವುದಾಗಿ ಬಿ.ಆರ್‌. ಶೆಟ್ಟಿಪ್ರಕಟಿಸಿದ್ದರು.

ಸಂವಿಧಾನದ 35ಎ ವಿಧಿ ಕಾಶ್ಮೀರದ ಜನರಿಗೆ ವಿಶೇಷ ಸೌಲಭ್ಯ ಕಲ್ಪಿಸಿತ್ತು. ಕಾಶ್ಮಿರದ ನಿವಾಸಿಗಳನ್ನು ಹೊರತುಪಡಿಸಿ ಅನ್ಯ ರಾಜ್ಯದವರು ಆಸ್ತಿಗಳನ್ನು ಖರೀದಿಸಲು ಅವಕಾಶ ಇರಲಿಲ್ಲ. ಆದರೆ, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ಹಾಗೂ 35ಎ ವಿಧಿಯನ್ನು ರದ್ದುಗೊಳಿಸಿರುವುದರಿಂದ ಕಾಶ್ಮೀರದಲ್ಲಿ ಹೂಡಿಕೆ ಮತ್ತು ಆಸ್ತಿ ಖರೀದಿಗೆ ಅವಕಾಶ ಇದೆ. ಜಮ್ಮು- ಕಾಶ್ಮೀರದಲ್ಲಿ ರೆಸಾರ್ಟ್‌ ಆರಂಭಿಸುವ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಘೋಷಣೆ ಮಾಡಿವೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

17 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

17 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago