ನವದೆಹಲಿ: 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ.
ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ.
ಶೋಪಿಯಾನ್‌ನ ಕಳೆದ ಮೂರ್ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತು ದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ, ಭಯೋತ್ಪಾದಕ ಅಹ್ಸಾನ್ ಉಲ್ ಹಕ್ನ ಮನೆ ಸ್ಫೋಟಿಸಿ ನೆಲಸಮ ಮಾಡಲಾಗಿದೆ. 2018 ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದು, ಇತ್ತೀಚೆಗೆ ಕಣಿವೆಗೆ ಮತ್ತೆ ಪ್ರವೇಶಿಸಿದ್ದ ಎನ್ನಲಾಗಿದೆ. ಎಲ್ಲ ಭಯೋತ್ಪಾದಕರನ್ನು ವಾಂಟೆಡ್ ಲಿಸ್ಟ್ಗೆ ಸೇರಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…