ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ -Vishwanews24

Featured, ರಾಷ್ಟ್ರ ನ್ಯೂಸ್

ಹೊಸದಿಲ್ಲಿ :ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಬುಧವಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.

ಮನೋಜ್ ಸಿನ್ಹಾ (61) ಅವರು ಸಂಸದರಾಗಿ ಹಾಗೂ ಬಿಜೆಪಿಯ ಉನ್ನತ ರಾಷ್ಟ್ರೀಯ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಮೊದಲ ಆಡಳಿತಾವಧಿಯಲ್ಲಿ ಅವರು ರಾಜ್ಯ ಸಚಿವರಾಗಿದ್ದರು.

ಈ ಹಿಂದಿನ ಲೆಫ್ಟಿನೆಂಟ್ ಗವರ್ನರ್ ಮುರ್ಮು ಅವರು 1985 ಗುಜರಾತ್ ಕೇಡರ್‍ನ ಅಧಿಕಾರಿಯಾಗಿದ್ದರಲ್ಲದೆ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಸೇವೆಯಲ್ಲಿದ್ದರು. ಮೋದಿ ಪ್ರಧಾನಿಯಾದ ನಂತರ ಅವರು ಕೇಂದ್ರ ವಿತ್ತ ಸಚಿವಾಲಯದ ಅಧಿಕಾರಿಯಾಗಿದ್ದರಲ್ಲದೆ ಖರ್ಚುವೆಚ್ಚಗಳ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.