Featured

ಜಮ್ಮು ಕಾಶ್ಮೀರ‌ : ಕಂದಕಕ್ಕೆ ಉರುಳಿದ ಸೇನಾ ಟ್ರಕ್​; ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ – vishwanews24

ಜಮ್ಮು ಕಾಶ್ಮೀರ‌ : ಕಂದಕಕ್ಕೆ ಉರುಳಿದ ಸೇನಾ ಟ್ರಕ್​; ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ ಐವರು ಮೃತ ಪಟ್ಟಿದ್ದಾರೆ.

ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಗುರುವಾರ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಘಟನೆ ಹಿನ್ನೆಲೆ:

ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Vishwa News 24

Recent Posts

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ…

9 seconds ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

33 minutes ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 hours ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

4 hours ago