ಶ್ರೀನಗರ : ಪ್ರತ್ಯೇಕ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕಾರ್ ಮೈತ್ರಿ ಕೂಟ ಮೇಲುಗೈ ಸಾಧಿಸಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಒಟ್ಟು 280 ಜಿಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ನಡೆದ ಚುನಾವಣೆಯಲ್ಲಿ ರಾತ್ರಿ ಪ್ರಕಟವಾದ ಫಲಿತಾಂಶದ ಪ್ರಕಾರ ಗುಪ್ಕಾರ್ ಕೂಟ 114 ಸ್ಥಾನ ಗೆದ್ದಿದೆ.ಬಿಜೆಪಿ 71 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 24 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇತರರು 60ಕ್ಕೂ ಹೆಚ್ಚು ಸ್ಥಾನ ಪಡೆದುಕೊಂಡಿದ್ದಾರೆ.ಹೈದರಾಬಾದ್ ಪಾಲಿಕೆ ಚುನಾವಣೆ, ರಾಜಸ್ಥಾನ ಮತ್ತು ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಳಿಕ ಕಾಶ್ಮೀರ ಕಣಿವೆಯಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದಂತಾಗಿದೆ.
ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮೋಕ್ರಟಿಕ್ ಪಾರ್ಟಿ, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಎಂ) ಸೇರಿದಂತೆ 7 ಪಕ್ಷಗಳು ಗುಪ್ಕಾರ್ ಮೈತ್ರಿಕೂಟವನ್ನು ರಚಿಸಿ ಚುನಾವಣೆ ಎದುರಿಸಿತ್ತು. 280 ಸ್ಥಾನಗಳಿಗೆ ಒಟ್ಟು 2,181 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನವೆಂಬರ್ 28 ರಿಂದ ಡಿಸೆಂಬರ್ 19ರವರೆಗೆ ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆದಿತ್ತು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…