Featured

ಜರ್ಮನಿ ಭಾರತೀಯರಿಂದ ‘2024 ಒನ್ಸ್‌ಮೋರ್‌ ಮೋದಿ’ ಜಯಘೋಷ – Vishwanews24

ಜರ್ಮನಿ ಭಾರತೀಯರಿಂದ ‘2024 ಒನ್ಸ್‌ಮೋರ್‌ ಮೋದಿ’ ಜಯಘೋಷ

ಬರ್ಲಿನ್: ಜರ್ಮನಿಯ ಬರ್ಲಿನ್‌ಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರಮೋದಿ ಅವರು ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸಹ-ಅಧ್ಯಕ್ಷತೆಯಲ್ಲಿ ಬರ್ಲಿನ್‌ನಲ್ಲಿ ಕಾರ್ಯಕ್ರಮ ನಡೆಯಿತು.

ಬರ್ಲಿನ್‌ನ ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು) ಎಂದು ಜಯಘೋಷ ಕೂಗಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರನ್ನು ನೋಡಿ ತುಂಬಾ ಸಂತೋಷವಾಗುತ್ತಿದೆ. ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇನ್ನಷ್ಟು ಖುಷಿ ನೀಡಿದೆ ಎಂದರು.

ಈ ಹಿಂದೆ ವಿದೇಶಿಯರ ಆಳ್ವಿಕೆಯಿಂದ ದೇಶ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಇಂದು ಅಭಿವೃದ್ಧಿಯ ಆದಿಯಲ್ಲಿ ಮುನ್ನಡೆಯುತ್ತಿದೆ. ದೇಶದ ಸಂಪನ್ಮೂಲದಲ್ಲಿ ಎಂದಿಗೂ ಕೊರತೆಯಾಗುವುದಿಲ್ಲ ಎಂದೂ ಅವರು ಹೇಳಿದರು.

ಮುಂದುವರಿದು, ಯಾವುದೇ ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಇಂದು ಭಾರತದಲ್ಲಿ ಜೀವನ ಗುಣಮಟ್ಟ, ಶಿಕ್ಷಣದ ಗುಣಮಟ್ಟ ಸೇರಿದಂತೆ ಎಲ್ಲ ಕ್ಷೇತ್ರಗಳೂ ಮುನ್ನಡೆಯುತ್ತಿವೆ. ಅಧಿಕಾರ ಶಾಹಿಯಾಗಿದ್ದ ಕಚೇರಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಸರ್ಕಾರ ತನ್ನ ಸುಧಾರಣೆಗಳ ಮೂಲಕ ದೇಶವನ್ನು ಪರಿವರ್ತಿಸುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago