ಬರ್ಲಿನ್: ಜರ್ಮನಿಯ ಬರ್ಲಿನ್‌ಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರಮೋದಿ ಅವರು ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸಹ-ಅಧ್ಯಕ್ಷತೆಯಲ್ಲಿ ಬರ್ಲಿನ್‌ನಲ್ಲಿ ಕಾರ್ಯಕ್ರಮ ನಡೆಯಿತು.
ಬರ್ಲಿನ್‌ನ ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು) ಎಂದು ಜಯಘೋಷ ಕೂಗಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರನ್ನು ನೋಡಿ ತುಂಬಾ ಸಂತೋಷವಾಗುತ್ತಿದೆ. ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇನ್ನಷ್ಟು ಖುಷಿ ನೀಡಿದೆ ಎಂದರು.
ಈ ಹಿಂದೆ ವಿದೇಶಿಯರ ಆಳ್ವಿಕೆಯಿಂದ ದೇಶ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಇಂದು ಅಭಿವೃದ್ಧಿಯ ಆದಿಯಲ್ಲಿ ಮುನ್ನಡೆಯುತ್ತಿದೆ. ದೇಶದ ಸಂಪನ್ಮೂಲದಲ್ಲಿ ಎಂದಿಗೂ ಕೊರತೆಯಾಗುವುದಿಲ್ಲ ಎಂದೂ ಅವರು ಹೇಳಿದರು.
ಮುಂದುವರಿದು, ಯಾವುದೇ ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಇಂದು ಭಾರತದಲ್ಲಿ ಜೀವನ ಗುಣಮಟ್ಟ, ಶಿಕ್ಷಣದ ಗುಣಮಟ್ಟ ಸೇರಿದಂತೆ ಎಲ್ಲ ಕ್ಷೇತ್ರಗಳೂ ಮುನ್ನಡೆಯುತ್ತಿವೆ. ಅಧಿಕಾರ ಶಾಹಿಯಾಗಿದ್ದ ಕಚೇರಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಸರ್ಕಾರ ತನ್ನ ಸುಧಾರಣೆಗಳ ಮೂಲಕ ದೇಶವನ್ನು ಪರಿವರ್ತಿಸುತ್ತಿದೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…