ಪುಣೆ : ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಡ್ಯಾಂ ಬಳಿ ಇಡೀ ಒಂದು ಕುಟುಂಬವೇ ನೀರಿನಲ್ಲಿ ಕೊಚ್ಚಿ ಹೋದ ಕುಟುಂಬದ ದುರಂತ ಹಸಿರಾಗಿರುವಂತೆಯೇ, ಮತ್ತದೇ ಮಹಾರಾಷ್ಟ್ರದಲ್ಲಿ ಮತ್ತೊಂದು ದುರಂತ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ತಮ್ಹಿನಿ ಘಾಟ್ ನಲ್ಲಿ ಜಲಪಾತದಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಜಲಪಾತದಲ್ಲಿ ಈಜಲು ಹೋದ ಯುವಕನೋರ್ವ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾನೆ. ಯುವಕ ನೀರಿಗೆ ಜಿಗಿದು ಈಜಿ ಮೇಲೆ ಬರಲಾಗದೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ನೀರಿನಲ್ಲಿ ಕೊಚ್ಚಿಕೊಂಡು ಹೋದ ಯುವಕನನ್ನು ಸ್ವಪ್ನಿಲ್ ಧಾವ್ಡೆ ಎಂದು ಗುರುತಿಸಲಾಗಿದ್ದು, ಈತ ತನ್ನ ಇತರ 32 ಮಂದಿ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ. ಈ ವೇಳೆ ತಮ್ಹಿನಿ ಘಾಟ್ ನ ಅಪಾಯಕಾರಿ ಜಲಪಾತದಲ್ಲಿ ಈಜಲು ಹೋಗಿ ಕೊಚ್ಚಿಕೊಂಡು ಹೋಗಿದ್ದಾನೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಸ್ವಪ್ನಿಲ್ ನನ್ನು ಹಿಡಿಯಲು ಆತನ ಸ್ನೇಹಿತರು ಯತ್ನಿಸಿದ್ದಾರೆಯಾದರೂ ನೀರಿನ ರಭಸ ಹೆಚ್ಚಾಗಿದ್ದರಿಂದ ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ನೋಡ ನೋಡುತ್ತಲೇ ನೀರಿನಲ್ಲಿ ಕೊಚ್ಚಿಕೊಂಡು ಹೋದ ಸ್ವಪ್ನಿಲ್ ಕಣ್ಮರೆಯಾಗಿದ್ದಾನೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…