ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಜವಾಬ್ದಾರಿಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಅವರ ಹೇಳಿಕೆ ಹೊರಬಿದ್ದಿದೆ.
ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸಾರ್ವಜನಿಕ ಕೆಲಸಗಳಲ್ಲಿ ತಮ್ಮ ಭಾಗವಹಿಸುವಿಕೆ ಕಡಿಮೆಯಾಗಿದ್ದು, ಕೆಲಸವನ್ನು ಮುನ್ನಡೆಸಲು ಯುವ ಪೀಳಿಗೆಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ :
“ನಾನು ಕಳೆದ 30 ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕ ಜೀವನದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಅನೇಕ ಏಳು-ಬೀಳುಗಳನ್ನು ಕಂಡಿದ್ದೇನೆ ಮತ್ತು ಹಲವು ಪ್ರಶಸ್ತಿಗಳನ್ನು ಪಡೆದಿದ್ದೇನೆ. ಆದರೆ ಈಗ ನನಗೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ, ಹೊಸ ತಲೆಮಾರಿನವರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು,” ಎಂದು ಗಡ್ಕರಿ ಹೇಳಿದರು.
ಕಳೆದ ವಾರ, ಬಿಜೆಪಿ ತನ್ನ ನೂತನ ರಾಷ್ಟ್ರೀಯ ತಂಡವನ್ನು ಪ್ರಕಟಿಸಿದ್ದು, 65 ಸದಸ್ಯರ ತಂಡದಲ್ಲಿ 51 ಹೊಸ ಮುಖಗಳನ್ನು ಸೇರಿಸಲಾಗಿದೆ. ಇದು ಪಕ್ಷದ ಸಂಘಟನೆಯೊಳಗೆ ಪ್ರಮುಖ ತಲೆಮಾರು ಬದಲಾವಣೆಯ ಸಂಕೇತ ಎಂದು ಹೇಳಲಾಗುತ್ತಿದೆ. ಇದು 2015 ರಲ್ಲಿ ಅಮಿತ್ ಶಾ ಪಕ್ಷದ ಅಧ್ಯಕ್ಷರಾಗಿದ್ದ ಬಳಿಕ ಪಕ್ಷದ ಅತಿ ದೊಡ್ಡ ಸಂಘಟನೆಯ ಪುನರ್ ರಚನೆಯಾಗಿದೆ.
ಇದನ್ನೂ ಓದಿ :
ಹೊಸ ತಂಡದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಮತ್ತು ಆರೆಸ್ಸೆಸ್ ನ ಮಾಜಿ ಪದಾಧಿಕಾರಿ ರಾಮ್ ಮಾಧವ್ ಸೇರಿದಂತೆ 13 ರಾಷ್ಟ್ರೀಯ ಉಪಾಧ್ಯಕ್ಷರಿದ್ದಾರೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪಕ್ಷದ ಎಂಟು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಒಬ್ಬರನ್ನಾಗಿ ನೇಮಿಸಲಾಗಿದೆ. ಈ ಸಂಘಟನಾ ಪುನರ್ರಚನೆಯು ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟದ ಸಂಭವನೀಯ ಪುನಾರಚನೆಯ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…