ಜಹಾಂಗಿರ್ಪುರಿ : ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ – Vishwanews24
ಜಹಾಂಗಿರ್ಪುರಿ : ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ
ನವದೆಹಲಿ; ನವದೆಹಲಿಯ ಜಹಾಂಗಿರ್ಪುರಿಯಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಬುಧವಾರ ದೆಹಲಿ ಮಹಾನಗರ ಪಾಲಿಕೆ ಪೊಲೀಸರ ಸಹಾಯದೊಂದಿಗೆ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಂಡಿತ್ತು.
ಬುಧವಾರ ದೆಹಲಿ ಮಹಾನಗರ ಪಾಲಿಕೆಯ ಜಹಾಂಗಿರ್ಪುರಿಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯ ಆರಂಭಿಸಿತ್ತು. ಈ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ ಮತ್ತು ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.
ಅಕ್ರಮ ಕಟ್ಟಡಗಳ ತೆರವು ಕಾರ್ಯ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತಡೆ ನೀಡಿದೆ. ಗುರುವಾರ ಮತ್ತೆ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.
North Delhi Municipal Corporation halts anti-encroachment drive after Supreme Court order to maintain status-quo pic.twitter.com/zj3wDUEViD
— ANI (@ANI) April 20, 2022
ಬುಧವಾರ ಜಹಾಂಗಿರ್ಪುರಿಯಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸಲು 9 ಜೆಸಿಬಿಗಳು ಆಗಮಿಸಿದ್ದವು. ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು 400 ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಆದರೆ ಕಾರ್ಯಾಚರಣೆ ಆರಂಭವಾದ ತಕ್ಷಣ ಸುಪ್ರೀಂಕೋರ್ಟ್ ಕಾರ್ಯಾಚರಣೆಗೆ ತಡೆ ನೀಡಿದ್ದು ಗುರುವಾರ ಅರ್ಜಿಯ ವಿಚಾರಣೆ ನಡೆಸುವ ತನಕ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.
ದೆಹಲಿಯ ಪೊಲೀಸ್ ಆಯುಕ್ತ ದಿಪೇಂದ್ರ ಪಾಠಕ್ ಸೇರಿದಂತೆ ಹಲವು ಅಧಿಕಾರಿಗಳು ಬುಧವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದರು. ಬಳಿಕ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.
ಸುಪ್ರೀಂಕೋರ್ಟ್ ಆದೇಶ ಬರುತ್ತಿದ್ದಂತೆಯೇ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.
ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ ಟಿ.ಬಿ.ಜಯಚಂದ್ರ – VIshwanews24
