Featured

ಜಹಾಂಗಿರ್‌ಪುರಿ : ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ – Vishwanews24

ಜಹಾಂಗಿರ್‌ಪುರಿ : ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ; ನವದೆಹಲಿಯ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಬುಧವಾರ ದೆಹಲಿ ಮಹಾನಗರ ಪಾಲಿಕೆ ಪೊಲೀಸರ ಸಹಾಯದೊಂದಿಗೆ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಂಡಿತ್ತು.

ಬುಧವಾರ ದೆಹಲಿ ಮಹಾನಗರ ಪಾಲಿಕೆಯ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯ ಆರಂಭಿಸಿತ್ತು. ಈ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದೆ ಮತ್ತು ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಅಕ್ರಮ ಕಟ್ಟಡಗಳ ತೆರವು ಕಾರ್ಯ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ತಡೆ ನೀಡಿದೆ. ಗುರುವಾರ ಮತ್ತೆ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.

ಬುಧವಾರ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸಲು 9 ಜೆಸಿಬಿಗಳು ಆಗಮಿಸಿದ್ದವು. ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು 400 ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ಆದರೆ ಕಾರ್ಯಾಚರಣೆ ಆರಂಭವಾದ ತಕ್ಷಣ ಸುಪ್ರೀಂಕೋರ್ಟ್‌ ಕಾರ್ಯಾಚರಣೆಗೆ ತಡೆ ನೀಡಿದ್ದು ಗುರುವಾರ ಅರ್ಜಿಯ ವಿಚಾರಣೆ ನಡೆಸುವ ತನಕ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ದೆಹಲಿಯ ಪೊಲೀಸ್ ಆಯುಕ್ತ ದಿಪೇಂದ್ರ ಪಾಠಕ್ ಸೇರಿದಂತೆ ಹಲವು ಅಧಿಕಾರಿಗಳು ಬುಧವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದರು. ಬಳಿಕ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.

ಸುಪ್ರೀಂಕೋರ್ಟ್ ಆದೇಶ ಬರುತ್ತಿದ್ದಂತೆಯೇ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

9 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

15 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago