ಒಸಾಕಾ(ಜಪಾನ್): ‘ಜಾಗತಿಕವಾಗಿ ವ್ಯಾಪಿಸಿರುವ ಭಯೋತ್ಪಾದನೆಯು ಮಾನವೀಯತೆಗೆ ಬಹು ದೊಡ್ಡ ಅಪಾಯಕಾರಿಯಾಗಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ಮಟ್ಟ ಹಾಕಲು ಎಲ್ಲರೂ ಕೈಜೋಡಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿದ್ದಾರೆ.
28–29ರಂದು ಇಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗಾಗಿ ಮೋದಿ ಅವರು ಜಪಾನ್‌ಗೆ ಭೇಟಿ ಕೊಟ್ಟಿದ್ದು, ಶೃಂಗಸಭೆಗೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಪ್ರಂಪ್ ಸೇರಿದಂತೆ ವಿವಿಧ ರಾಷ್ಟ್ರ ನಾಯಕರ ಜತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.
ಭಯೋತ್ಪಾದನೆ ಅಮಾಯಕರ ಬದುಕನ್ನೇ ಕಿತ್ತುಕೊಳ್ಳುವುದು ಮಾತ್ರವಲ್ಲ, ಇದು ಆರ್ಥಿಕ ಬೆಳವಣಿಗೆ ಮತ್ತು ಕೋಮು ಸೌಹಾರ್ದದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆ ಮತ್ತು ವರ್ಣಭೇದ ನೀತಿಗೆ ಬೆಂಬಲ ನೀಡುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಬೇಕಿದೆ ಎಂದು ಎಚ್ಚರಿಸಿದರು.
ಅಭಿವೃದ್ಧಿಯನ್ನು ಸುಸ್ಥಿರಗೊಳಿಸಿ ಎಲ್ಲರನ್ನೂ ಒಳಗೊಳ್ಳಿಸುವುದು ಮತ್ತೊಂದು ಸವಾಲು. ಡಿಜಿಟಲೀಕರಣದಂತಹ ತ್ವರಿತವಾಗಿ ಬದಲಾಗುತ್ತಿರುವ ತಂತ್ರಜ್ಞಾನಗಳು, ಹವಾಮಾನ ಬದಲಾವಣೆಯ ಸವಾಲುಗಳು ವರ್ತಮಾನದಲ್ಲಿ ಮಾತ್ರವಲ್ಲ ಭವಿಷ್ಯದ ತಲೆಮಾರುಗಳಿಗೂ ಅಪಾಯ ತಂದೊಡ್ಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…