Featured

ಜಾತಿ, ಧರ್ಮವನ್ನು ಮರೆತು ಹಿಂದೂ ಯುವತಿಯ ವಿವಾಹಕ್ಕೆ ನೆರವಾದ ಮುಸ್ಲಿಂ ಬಾಂಧವರು – Vishwanews24

ಉಪ್ಪಿನಂಗಡಿ: ತೀರಾ ಬಡ ಕುಟುಂಬದ ಹಿಂದೂ ಧರ್ಮದ ಯುವತಿಯ ಮದುವೆಯೊಂದನ್ನು ನೆರೆಯ ಮುಸ್ಲಿಂಮರೇ ಮುಂದೆ ನಿಂತು ಮಾಡುವ ಮೂಲಕ ಸೌಹಾರ್ದತೆ ಮೆರೆದ ಘಟನೆ ಉಪ್ಪಿನಂಗಡಿ ಸಮೀಪದ ಕರುವೇಲು ಎಂಬಲ್ಲಿ ಸೋಮವಾರ ನಡೆದಿದೆ.

ತೀರಾ ಬಡ ಕುಟುಂಬದ ರೇವತಿ ಫ್ಯಾಕ್ಟರಿಯೊಂದರಲ್ಲಿ ದುಡಿಯುತ್ತಿದ್ದು, ಈಕೆಗೆ ಸಾಲ್ಮರದ ಯುವಕ ಶರತ್‌ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈಕೆಗೆ ತಂದೆ ತಾಯಿ ಇದ್ದರೂ ಮುಂದೆ ನಿಂತು ಮದುವೆ ಮಾಡಿಸುವಷ್ಟು ಅವರು ಶಕ್ತರಾಗಿರಲಿಲ್ಲ. ಹೀಗಿರುವಾಗ ಅವರ ನೆರವಿಗೆ ಬಂದಿದ್ದು, ಅವರ ಮನೆ ಸಮೀಪದ ಮುಸ್ಲಿಮ್‌ ಯುವಕರು.

ಮಾನವೀಯತೆಯ ನಂಟಿನಿಂದ ಹುಡುಗಿಯ ಪರವಾಗಿ ಹುಡುಗನ ಮನೆಯವರನ್ನು ಮಾತನಾಡಿಸಿ ಮದುವೆಗೆ ದಿನ ನಿಗದಿ ಪಡಿಸಿದರು. ಈ ಸಂದರ್ಭ ಅವರೊಂದಿಗೆ ಯುವತಿಯ ಕೆಲ ಬಂಧುಗಳು ಕೂಡಿಕೊಂಡರು. ಅಕ್ಕ ಪಕ್ಕದ ಮನೆಗಳಿಂದ ಸೋಗೆಯನ್ನು ತಂದು ಚಪ್ಪರ ಹಾಕಿದರು.

ಲತೀಫ್‌ ಎಂಬವರ ಮನೆಯಲ್ಲಿ ಮದುಮಗಳನ್ನು ಶೃಂಗರಿಸಿ ಹಿಂದೂ ಸಂಪ್ರದಾಯದಂತೆ ವಿವಾಹ ಶಾಸ್ತ್ರವನ್ನು ನೆರವೇರಿಸಿದರು. ಮದುವೆಯ ಅಂಗವಾಗಿ 150 ಮಂದಿಗೆ ಮಾಂಸದೂಟವನ್ನೂ ಸಿದ್ಧಪಡಿಸಿ ಉಣಬಡಿಸಿದರು.ಮಾಂಗಲ್ಯ ಸೂತ್ರ, ಮದುಮಗಳ 2 ಜತೆ ವಸ್ತ್ರವನ್ನೊಳಗೊಂಡಂತೆ ಎಲ್ಲಾ ಕಾರ್ಯಕ್ಕೆ ತಗುಲಿದ ವೆಚ್ಚವನ್ನು ಲತೀಫ್, ನಿಹಾ ಡ್ರೆಸ್ಸಸ್ ನ ಮಾಲೀಕ ಕೆ.ಅಬೂಬಕ್ಕರ್, ಶಮೀರ್, ಪುತ್ತುಮೋನು ಮತ್ತಿತರರು ಭರಿಸಿ ಮಾನವೀಯತೆ ಮೆರೆದರು.

ಜಾತಿ, ಧರ್ಮ ಮರೆತು ಹೆಣ್ಣುಮಗಳ ಬಾಳಿಗೆ ಬೆಳಕಾಗುವ ಮೂಲಕ ಈ ಮುಸ್ಲಿಂ ಬಾಂಧವರ ಕಾರ್ಯ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago