ಉಪ್ಪಿನಂಗಡಿ: ತೀರಾ ಬಡ ಕುಟುಂಬದ ಹಿಂದೂ ಧರ್ಮದ ಯುವತಿಯ ಮದುವೆಯೊಂದನ್ನು ನೆರೆಯ ಮುಸ್ಲಿಂಮರೇ ಮುಂದೆ ನಿಂತು ಮಾಡುವ ಮೂಲಕ ಸೌಹಾರ್ದತೆ ಮೆರೆದ ಘಟನೆ ಉಪ್ಪಿನಂಗಡಿ ಸಮೀಪದ ಕರುವೇಲು ಎಂಬಲ್ಲಿ ಸೋಮವಾರ ನಡೆದಿದೆ.
ಮಾನವೀಯತೆಯ ನಂಟಿನಿಂದ ಹುಡುಗಿಯ ಪರವಾಗಿ ಹುಡುಗನ ಮನೆಯವರನ್ನು ಮಾತನಾಡಿಸಿ ಮದುವೆಗೆ ದಿನ ನಿಗದಿ ಪಡಿಸಿದರು. ಈ ಸಂದರ್ಭ ಅವರೊಂದಿಗೆ ಯುವತಿಯ ಕೆಲ ಬಂಧುಗಳು ಕೂಡಿಕೊಂಡರು. ಅಕ್ಕ ಪಕ್ಕದ ಮನೆಗಳಿಂದ ಸೋಗೆಯನ್ನು ತಂದು ಚಪ್ಪರ ಹಾಕಿದರು.
ಲತೀಫ್ ಎಂಬವರ ಮನೆಯಲ್ಲಿ ಮದುಮಗಳನ್ನು ಶೃಂಗರಿಸಿ ಹಿಂದೂ ಸಂಪ್ರದಾಯದಂತೆ ವಿವಾಹ ಶಾಸ್ತ್ರವನ್ನು ನೆರವೇರಿಸಿದರು. ಮದುವೆಯ ಅಂಗವಾಗಿ 150 ಮಂದಿಗೆ ಮಾಂಸದೂಟವನ್ನೂ ಸಿದ್ಧಪಡಿಸಿ ಉಣಬಡಿಸಿದರು.ಮಾಂಗಲ್ಯ ಸೂತ್ರ, ಮದುಮಗಳ 2 ಜತೆ ವಸ್ತ್ರವನ್ನೊಳಗೊಂಡಂತೆ ಎಲ್ಲಾ ಕಾರ್ಯಕ್ಕೆ ತಗುಲಿದ ವೆಚ್ಚವನ್ನು ಲತೀಫ್, ನಿಹಾ ಡ್ರೆಸ್ಸಸ್ ನ ಮಾಲೀಕ ಕೆ.ಅಬೂಬಕ್ಕರ್, ಶಮೀರ್, ಪುತ್ತುಮೋನು ಮತ್ತಿತರರು ಭರಿಸಿ ಮಾನವೀಯತೆ ಮೆರೆದರು.
ಜಾತಿ, ಧರ್ಮ ಮರೆತು ಹೆಣ್ಣುಮಗಳ ಬಾಳಿಗೆ ಬೆಳಕಾಗುವ ಮೂಲಕ ಈ ಮುಸ್ಲಿಂ ಬಾಂಧವರ ಕಾರ್ಯ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…