Featured

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ  – vishwanews24

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ

ಮೈಸೂರು: ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಆಚರಣೆಯನ್ನು ಉದ್ಘಾಟಿಸಿ ನಂತರ ಉಪ್ಪಾರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದು ಹೇಳಿದರು.

ಚತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇರಲಿಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ಈ ಉದ್ದೇಶದಿಂದಲೇ ಉಪ್ಪಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದೇವೆಂದು ತಿಳಿಸಿದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ. ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದರು.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಕೂಡ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು. ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ, ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ. ಬದಲಾವಣೆ ಖಂಡಿತವಾಗಿ ಬರಲಿದೆ ಎಂದು ಭರವಸೆ ನೀಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago