Featured

ಜಾತೀಯತೆ ದೂರವಾಗಬೇಕೆಂದು ಧ್ವನಿ ಎತ್ತಿದ್ದ ಗಾಂಧಿಯನ್ನು ದ್ವೇಷದಿಂದ ಗುಂಡಿಟ್ಟು ಕೊಲ್ಲಲಾಯಿತು : ನಿಕೇತ್ ರಾಜ್ ಮೌರ್ಯ – vishwanews24

ಉಡುಪಿ: ಹಿರಿಯಡ್ಕದಲ್ಲಿ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಬೃಹತ್ ಸಮಾವೇಶ..

ಅಂಬೇಡ್ಕರ್ ಸಂವಿಧಾನ ಉಳಿದರೆ ಮಾತ್ರ ಈ ದೇಶದಲ್ಲಿ ಸಮಾನತೆ ಉಳಿಯಲು ಸಾಧ್ಯ : ನಿಕೇತ್ ರಾಜ್ ಮೌರ್ಯ

ಇತಿಹಾಸವನ್ನೇ ತಿಳಿದುಕೊಳ್ಳದವರು ಇಂದು ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ : ಜಯಪ್ರಕಾಶ ಹೆಗ್ಡೆ

ಸಂವಿಧಾನವನ್ನು ಬದಲಾಯಿಸುವ ಹುನ್ನಾರ ನಡೆಯುತ್ತಿದೆ : ವಿನಯ್ ಕುಮಾರ್ ಸೊರಕೆ

ಉಡುಪಿ: ಅಂಬೇಡ್ಕರ್ ಸಂವಿಧಾನ ಉಳಿದರೆ ಮಾತ್ರ ಈ ದೇಶದಲ್ಲಿ ಸಮಾನತೆ ಉಳಿಯಲು ಸಾಧ್ಯವಾಗುತ್ತದೆ. ಆದರೆ ಈ ಸಂವಿಧಾನವನ್ನು ದುರ್ಬಲಗೊಳಿಸಲು ಅನೇಕ ಪ್ರಯತ್ನಗಳು ಇಂದು ನಡೆಯುತ್ತಿವೆ. ಮನು ಸಂವಿಧಾನವನ್ನು ಮತ್ತೆ ತರಲು ಹೊರಟಿದ್ದಾರೆ. ಅದರ ವಿರುದ್ಧ ಅಂಬೇಡ್ಕರ್ ಸಂವಿಧಾನ ಮಾತ್ರ ನಮ್ಮ ರಕ್ಷಿಸಲು ಸಾಧ್ಯ. ಆದುದರಿಂದ ಅಂಬೇಡ್ಕರ್ ಸಂವಿಧಾನವನ್ನು ನಮ್ಮ ಮಕ್ಕಳಿಗೆ ತಿಳಿಸಿ ಉಳಿಸುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದ್ದಾರೆ.

ಗಾಂಧಿ ಭಾರತ ಹಿರಿಯಡ್ಕ ಇದರ ಆಶ್ರಯದಲ್ಲಿ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧ್ಯೇಯವಾಕ್ಯದಡಿ ಹಿರಿಯಡಕದ ಶ್ರೀವೀರಭದ್ರ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಲಾದ ಗಾಂಧಿ ಭಾರತ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಅಂಬೇಡ್ಕರ್ ಬರೆದ ಸಂವಿಧಾನವನ್ನು ನಾವು ಉಳಿಸಿಕೊಳ್ಳಬೇಕು. ಯಾಕೆಂದರೆ ಇಂದು ನಾವು ಸಮಾನವಾಗಿ ಕೂರಲು ಸಾಧ್ಯವಾಗಿರುವುದು ಈ ಸಂವಿಧಾನದಿಂದ. ಅಂಬೇಡ್ಕರ್ ಬರೆದ ಸಂವಿಧಾನವೇ ನಮಗೆ ಸಮಾನತೆ ಕೊಟ್ಟಿದೆ. ನಮ್ಮ ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದವರು, ಮಹಿಳೆಯರು ಕೂಡ ಅಧಿಕಾರ ಪಡೆಯುವಂತಾಗಿದೆ ಎಂದು ಅವರು ತಿಳಿಸಿದರು.

ಇಂದು ದೇಶ ಸಂದಿಗ್ಧ ಸ್ಥಿತಿಯಲ್ಲಿದೆ. ಗಾಂಧಿಯನ್ನು ಕಳೆದುಕೊಂಡ ಈ ದೇಶ ಅನಾಥವಾಗಿ ಹೋಗಿದೆ. ಇಡೀ ದೇಶವನ್ನು ಜಾತಿಧರ್ಮ ಮೀರಿ ಒಂದಾಗಿಸುವಲ್ಲಿ ಗಾಂಧಿ ಹೋರಾಟ ಮಾಡಿದರು. ಈ ಸಮಾಜದಲ್ಲಿನ ಜಾತೀಯತೆ ದೂರವಾಗ ಬೇಕೆಂದು ಧ್ವನಿ ಎತ್ತಿದ್ದ ಗಾಂಧಿಯನ್ನು ಅದೇ ಧ್ವೇಷದಿಂದ ಗುಂಡಿಟ್ಟು ಕೊಲ್ಲಲಾಯಿತು. ಆ ಮೂಲಕ ನಾವು ಮಹಾನ್ ತ್ಯಾಗಿಯನ್ನು ಕಳೆದು ಕೊಂಡಿದ್ದೇವೆ ಎಂದರು.

ಚರಕವನ್ನು ತಿರುಗಿಸುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿ, ಇತಿಹಾಸವನ್ನೇ ತಿಳಿದುಕೊಳ್ಳದವರು ಇಂದು ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ. ಇವರು ಯಾರು ಕೂಡ ಸಂವಿಧಾನ ವನ್ನು ಓದಿಯೇ ಇಲ್ಲ. ಬದಲಾದ ಸಂವಿಧಾನವನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ. ನಮ್ಮ ಸಂವಿಧಾನ ಜನರಿಗೆ ನೀಡುವ ಗೌರವ ಬೇರೆ ಯಾವುದೇ ಸಂವಿಧಾನ ನೀಡಲು ಅಸಾಧ್ಯ ಎಂದರು.

ಇಡೀ ಸಂವಿಧಾನದಲ್ಲಿ ಜಾತ್ಯತೀತೆ ಅಡಕವಾಗಿದೆ. ಭಾರತಕ್ಕೆ ಇಡೀ ಜಗತ್ತಿನಲ್ಲಿ ಹೆಸರು ಬರಲು ಇಲ್ಲಿಯ ಜಾತ್ಯತೀತೆಯೇ ಮುಖ್ಯ ಕಾರಣ. ಆದುದರಿಂದ ಪ್ರತಿಯೊಬ್ಬರು ನಮ್ಮ ದೇಶದ ಇತಿಹಾಸವನ್ನು ಅರಿತುಕೊಳ್ಳ ಬೇಕು. ಈ ದೇಶ ಎಲ್ಲರಿಗೂ ಸೇರಿದ್ದಾಗಿದೆ. ನಾವು ಒಂದಾಗಿ ಹೋಗಬೇಕು. ಗಾಂಧಿಯ ಮಾನವೀಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳ ಬೇಕು ಎಂದು ಅವರು ಹೇಳಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ‘ಸಂವಿಧಾನವನ್ನು ಬದಲಾಯಿಸುವ ಹುನ್ನಾರ ನಡೆಯುತ್ತಿದೆ. ಹಿಂದು ರಾಷ್ಟ್ರದ ಸಂವಿಧಾನ ಸಿದ್ಧ ಪಡಿಸಲಾಗಿದೆ. ನಮ್ಮ ಸಂವಿಧಾನ ನಮಗೆ ರಕ್ಷಣೆ ಕೊಟ್ಟಿದೆ ಮತ್ತು ಆರ್ಥಿಕ ಶಕ್ತಿ ನೀಡಿದೆ. ಆದುದರಿಂದ ಆ ಸಂವಿಧಾನವನ್ನು ಉಳಿಸುವ ಕಾರ್ಯ ಮಾಡಬೇಕು. ಅದಕ್ಕೆ ನಾವೆಲ್ಲ ಕಟಿಬದ್ಧರಾಗಬೇಕು. ಎರಡನೇ ಸ್ವಾತಂತ್ರ್ಯ ಹೋರಾಟದ ಮೂಲಕವಾದರೂ ಸಂವಿಧಾನವನ್ನು ಉಳಿಸುವ ಹೋರಾಟಕ್ಕೆ ನಾವೆಲ್ಲ ಸಿದ್ಧರಾಬೇಕು’ ಎಂದರು

ನ್ಯಾಯವಾದಿ ಸುಧೀರ್ ಮರೋಳಿ ಮಾತನಾಡಿದರು. ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ವರೋನಿಕಾ ಕರ್ನೆಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್, ನವೀನ ಚಂದ್ರ ಸುವರ್ಣ, ರಮೇಶ್ ಕಾಂಚನ್, ಮಲ್ಪೆ ರಾಘವೇಂದ್ರ, ಇಸ್ಮಾಯಿಲ್ ಆತ್ರಾಡಿ, ಸರ್ಫುದ್ದೀನ್ ಶೇಕ್ ಮೊದಲಾದವರು ಉಪಸ್ಥಿತರಿದ್ದರು.

ಸಂವಿಧಾನ ಪೀಠಿಕೆಯನ್ನು ರಾಯ್ಸ್ ಫೆರ್ನಾಂಡಿಸ್ ಬೋಧಿಸಿದರು. ಇದಕ್ಕೂ ಮೊದಲು ದೇವಾಡಿಗ ಸಭಾಭವನದಿಂದ ಸಮಾವೇಶ ಸ್ಥಳದವರೆಗೆ ಮೆರವಣಿಗೆ ನಡೆಯಿತು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಂತ ರಾವ್ ಸ್ವಾಗತಿಸಿದರು. ಸಮಾವೇಶದ ಸಂಚಾಲಕ ಉದ್ಯಾವರ ನಾಗೇಶ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago