ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,037 ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣ ಕಂಡುಬಂದಿದ್ದು, 154 ಜಾನುವಾರುಗಳು ಮರಣ ಹೊಂದಿವೆ. ಜಾನುವಾರುಗಳಿಗೆ ಹರಡುತ್ತಿರುವ ರೋಗದ ನಿಯಂತ್ರಣಕ್ಕಾಗಿ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ದ. ಪಕ್ಕದ ತಮಿಳುನಾಡು ಮತ್ತು ಆಂಧ್ರಪ್ರದೇಶದ ರೈತರು ಸಹ ಜಾತ್ರೆಗೆ ಬಂದು ದನಗಳ ವ್ಯಾಪಾರ ಮಾಡುತ್ತಾರೆ. ಡಿಸೆಂಬರ್ 20ರಂದು ಈ ವರ್ಷದ ಘಾಟಿ ದನಗಳ ಜಾತ್ರೆಗೆ ಸಿದ್ಧತೆ ನಡೆದಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿವೆ. ಮುಂಜಾಗ್ರತಾ ಕ್ರಮವಾಗಿ 1,51,526 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಜಿಲ್ಲೆಯ ವಿವಿಧೆಡೆ ದನಗಳ ಜಾತ್ರೆ ನಡೆಯುತ್ತದೆ. ದನಗಳು ಒಂದೆಡೆ ಸೇರುವುದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.
ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ ಈ ಬಗ್ಗೆ ಮಾತನಾಡಿ, ಚರ್ಮಗಂಟು ರೋಗದ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಜಾನುವಾರುಗಳ ಜಾತ್ರೆಗೆ ನಿಷೇಧ ಮಾಡುವುದಾಗಿ ಹೇಳಿದ್ದರು. ಸಚಿವರ ಸೂಚನೆಯಂತೆ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ ವಸ್ತುಸ್ಥಿತಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಚರ್ಮಗಂಟು ರೋಗವನ್ನು ನಿಯಂತ್ರಣ ಮಾಡಲು ಕರ್ನಾಟಕ ಅನಿಮಲ್ ಡಿಸೀಸ್ 1961ರ ಕಾಯ್ದೆ ಪ್ರಕಾರ, 2023ರ ಜನವರಿ 30ರವರೆಗೂ ಜಿಲ್ಲೆಯಲ್ಲಿ ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆ ಮಾಡದಂತೆ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…