Featured

ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

ಬೆಂಗಳೂರು, :ಲೈಂಗಿಕ ಹಗರಣದ ಸಿಡಿ ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಸಿಡಿಯಲ್ಲಿ ಇದ್ದಾರೆ ಎಂದು ಶಂಕಿಸಲಾದ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ.

ಇಂದು ಮೂರನೇ ಸಿಡಿಯನ್ನು ಬಿಡುಗಡೆ ಮಾಡಿರುವ ಯುವತಿ ತಮಗೆ ವ್ಯಕ್ತವಾದ ಅಭೂತ ಪೂರ್ವ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದ್ದು, ವಕೀಲರಾದ ಜಗದೀಶ್ ಅವರ ಮೂಲಕ ಮಾಜಿ ಸಚಿವ ರಮೇಶ್‍ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

ಈ ಮೂಲಕ ರಮೇಶ್ ಜಾರಕಿಹೊಳಿ ಹೊಸ ಸಂಕಟಕ್ಕೆ ಸಿಲುಕಿದಂತಾಗಿದೆ. ಈವರೆಗೂ ಯುವತಿ ಹೇಳಿಕೆ ಇಲ್ಲ. ಯಾವುದೇ ದೂರು ಬಂದಿಲ್ಲ ಎಂಬ ಕಾರಣಕ್ಕಾಗಿ ತನಿಖೆಗೆ ಭಾರೀ ಹಿನ್ನಡೆಯಾಗಿತ್ತು. ಈಗ ಯುವತಿ ಪರವಾಗಿ ವಕೀಲ ಜಗದೀಶ್ ದೂರು ನೀಡುತ್ತಿರುವುದು ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಂತಾಗಿದೆ.

ಇದನ್ನೂ ಓದಿ : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವ ಸೆರೆ -Vishwanews24

ಸಿಡಿಯಲ್ಲಿ ಮಾತನಾಡಿರುವ ಯುವತಿ ಕಳೆದ 24 ದಿನಗಳಿಂದ ನಾನು ಪ್ರಾಣ ಭಯದಲ್ಲಿ ಇದ್ದೆ. ಕರ್ನಾಟಕದ ಜನತೆ, ವಿವಿಧ ಸಂಘಟನೆಗಳು, ಎಲ್ಲಾ ಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರಿಂದ ನನಗೆ ಧೈರ್ಯ ಬಂದಿದೆ. ಹಾಗಾಗಿ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಯುವತಿ ಪರವಾಗಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಿರುವ ವಕೀಲ ಜಗದೀಶ್ ಅವರು ಸುದ್ದಿಗಾರರ ಜತೆ ಮಾತನಾಡಿ, ಕಳೆದ ಒಂದು ವಾರಗಳಿಂದ ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ಗಮನಿಸಿ ನಾವು ಯುವತಿಯನ್ನು ಸಂಪರ್ಕಿಸಿ ಕಾನೂನಿನ ನೆರವು ನೀಡುವುದಾಗಿ ಹೇಳಿದ್ದೆವು. ಅದಕ್ಕೆ ಆಕೆ ಒಪ್ಪಿಕೊಂಡಿದ್ದಾರೆ.ದೂರು ನೀಡುವಂತೆ ನಮಗೆ ಮನವಿ ಮಾಡಿದ್ದು, ಪತ್ರ ಹಾಗೂ ವಿಡಿಯೋ ಕಳುಹಿಸಿದ್ದಾರೆ. ಅದರ ಪ್ರಕಾರ ನಾವು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತಿದ್ದೇವೆ ಎಂದರು. ದೂರು ನೀಡಿದ ಬಳಿಕ ಪೊಲೀಸರ ಪ್ರತಿಕ್ರಿಯೆ ನೋಡಿಕೊಂಡು ಯುವತಿಯನ್ನು ಹಾಜರುಪಡಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು.

ಇದನ್ನೂ ಓದಿ :ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ : ರಾಹುಲ್ ಗಾಂಧಿ -Vishwanews24

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago