ಬೆಂಗಳೂರು: ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಕೇಸರಿಪಡೆ ಸಿಡಿದೆದ್ದಿದ್ದು, ಸಚಿವ ಸುನೀಲ್ ಕುಮಾರ್ (Sunil Kumar) ‘ಸ್ವಾಭಿಮಾನಿ ಹಿಂದು’ ಅಭಿಯಾನ ಆರಂಭಿಸಿದರು.
ಈ ಸಂಬಂಧ ಟ್ವೀಟ್ (Tweet) ಮಾಡಿರುವ ಅವರು, ಕಾಂಗ್ರೆಸ್ (Congress) ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು (Jawaharlal Nehru) ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ನಿಜಕ್ಕೂ ಖಂಡನೀಯ ,ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು
– ಸತೀಶ್ ಜಾರಕಿಹೊಳಿಗೆ ಹಿಂದು ಶಬ್ದ ಅಶ್ಲೀಲ.
– ಸಿದ್ದರಾಮಯ್ಯ ಅವರಿಗೆ ಕೇಸರಿ-ತಿಲಕ ಕಂಡರೆ ಭಯ
– ದೈವಾರಾಧನೆ ಹಾಗೂ ತೀರ್ಥ ಬಿ.ಟಿ.ಲಲಿತಾನಾಯಕರಿಗೆ ವಾಕರಿ ತರಿಸುತ್ತದೆ
– ಡಿ.ಕೆ.ಶಿವಕುಮಾರ್ ಗೆ ಮುಸ್ಲಿಂರು ಸೋದರರು
– ಎಂ.ಬಿ.ಪಾಟೀಲರಿಗೆ ಹಿಂದು ಧರ್ಮದ ಅಖಂಡತೆ ಒಡೆಯುವ ಯೋಚನೆ
– ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಗೆ ಭಗವದ್ಗೀತೆ ಜಿಹಾದ್ ಆಗಿ ಕಾಣುತ್ತದೆ
ಇವೆಲ್ಲವೂ ಕಾಂಗ್ರೆಸ್ ಒಳಮನಸಿನಲ್ಲಿರುವ ಹಿಂದು ವಿರೋಧಿ ಭಾವಗಳು ಎಂದು ಟೀಕೆ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆ ಹೆಸರಿನಲ್ಲಿ ರಾಹುಲ್ ಗಾಂಧಿ ನಡೆಸಿದ ಪಾದಯಾತ್ರೆಯ ಬಳಿಕ ಕಾಂಗ್ರೆಸ್ ನಾಯಕರ ಹಿಂದು ವಿರೋಧಿ ಹೇಳಿಕೆಗಳು ಮಿತಿಮೀರಿದೆ. ಕಾಂಗ್ರೆಸ್ ನಡೆಸುವ ಎಲ್ಲ ಯಾತ್ರೆ, ಅಭಿಯಾನದ ಹಿಂದಿರುವುದು ಹಿಂದು ದ್ವೇಷ. ಕಾಂಗ್ರೆಸ್ ಅಧಿನಾಯಕರ ಭಾವನೆಗಳಿಗೆ ಸತೀಶ್ ಜಾರಕಿಹೊಳಿ ಮಾತಿನ ರೂಪ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದರು. ಇದನ್ನೂ ಓದಿ : ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ
ಹಿಂದುತ್ವ ಎಂಬ ಜೀವನ ಪದ್ಧತಿಯನ್ನೇ ಟೀಕಿಸಿದ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ಇಡಿ ರಾಷ್ಟ್ರದ ಕ್ಷಮೆ ಯಾಚಿಸಬೇಕು. ಇದು ವೈಯಕ್ತಿಕ ಅಭಿಪ್ರಾಯ ಎಂದು ಕೈ ತೊಳೆದುಕೊಳ್ಳುವ ನಾಟಕ ಬೇಡ ಮಾನ್ಯ ಸುರ್ಜೇವಾಲಾ ಅವರೇ, ಭಾರತೀಯತೆಗೆ ಅಪಮಾನ ಮಾಡುವ ನಿಮ್ಮ ನಾಟಕಕ್ಕೆ ಕ್ಷಮೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಸ್ವಾಭಿಮಾನಿ ಹಿಂದು….
– ಹಿಂದುತ್ವದ ಅವಹೇಳನವಾದಾಗ ನಾನು ಪ್ರತಿರೋಧಿಸುತ್ತೇನೆ.
– ರಾಷ್ಟ್ರೀಯತೆಗೆ ಧಕ್ಕೆಯಾದಾಗ ನಾನು ಸೆಟೆದು ನಿಲ್ಲುತ್ತೇನೆ.
– ಭಾರತೀಯ ಪರಂಪರೆಯ ನಿಂದನೆಯಾದಾಗ ನಾನು ಹೋರಾಡುತ್ತೇನೆ.
ಸ್ವಧರ್ಮ, ಸ್ವದೇಶ, ಸ್ವಭಾಷೆ ನನ್ನ ಅಸ್ಮಿತೆ..
ನಾನು ಸ್ವಾಭಿಮಾನಿ ಹಿಂದು…..
– ನನ್ನೊಡಲೊಳಗೆ ದೇಶಭಕ್ತಿಯ ಕೆಚ್ಚಿದೆ.
– ನನ್ನ ಹೃದಯದಲ್ಲಿ ಹಿಂದು ರಾಷ್ಟ್ರ ಪ್ರೀತಿ ಇದೆ.
– ನನ್ನ ಮನಸಿನಲ್ಲಿ ಹಿಂದುತ್ವದ ಸಂಸ್ಕಾರವಿದೆ.
– ನನ್ನ ಉಸಿರಿನಲ್ಲಿ ರಾಷ್ಟ್ರ ವಿರೋಧಿಗಳ ವಿರುದ್ಧ ದ್ವೇಷವಿದೆ.
– ನನ್ನ ರಕ್ತದಲ್ಲಿ ಶಿವಾಜಿಯ ಸ್ವಾಭಿಮಾನವಿದೆ.
ಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ..
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…