ರಾಂಚಿ: ಗುಂಡೇಟಿಗೆ ನಿನ್ನೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ರಿಯಾ ಪತಿಯನ್ನೇ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ರಿಯಾ ಕುಮಾರಿ ಅವರ ಪತಿ ಪ್ರಕಾಶ್‌ಕುಮಾರ್ ಬಂಧಿತರು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾಕುಮಾರಿ ನಿನ್ನೆ ಗುಂಡೇಟಿಗೆ ಬಲಿಯಾಗಿದ್ದರು. ಬಳಿಕ ಅವರ ಪತಿ ಪ್ರಕಾಶ್‌ರಾಜ್ ದರೋಡೆಕಾರರು ಗುಂಡು ಹೊಡೆದಿದ್ದಾರೆಂದು ಪೊಲೀಸರೆದುರು ಹೇಳಿಕೊಂಡಿದ್ದರು. ಆದರೆ ಅವರ ಹೇಳಿಕೆಯಲ್ಲಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಶೌಚಕ್ಕೆಂದು ಕಾರು ನಿಲ್ಲಿಸಿ ಹೋದಾಗ ದರೋಡೆಕೋರರು ರಿಯಾ ಬಳಿ ಬಂದು ದರೋಡೆಗೆ ಯತ್ನಿಸಿದರು. ಆ ವೇಳೆ ಆಕೆ ಪ್ರತಿರೋಧ ಒಡ್ಡಿದಾಗ ಆಕೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪತಿ ಪ್ರಕಾಶ್ ರಾಜ್ ದೂರು ದಾಖಲಿಸಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…