ಬೆಳಗಾವಿ :ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್‌ಟಿ ಇದ್ದವರೂ ನಮ್ಮ ಪೋರ್ಟಲ್ಗೆ ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದರು.
ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ಟಿ ಇರುವ ಕಾರಣಕ್ಕೆ ತತಕ್ಷಣ ಅರ್ಜಿ ತಿರಸ್ಕಾರ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ ಎಂದರು.
ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳದ್ದು ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ತಿಳಿಸಿದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…