ಜಿಲ್ಲಾಡಳಿತ ಅನುಮತಿ ನೀಡಿದರೆ ಮಲ್ಪೆ ದ್ವೀಪದಲ್ಲಿ ಸಾರ್ವಜನಿಕ ಸಹಕಾರದೊಂದಿಗೆ ಪೇಜಾವರ ಶ್ರೀಗಳ ಭವ್ಯ ಸ್ಮಾರಕ ನಿರ್ಮಿಸಲಿದ್ದೇವೆ : ಯಶ್ ಪಾಲ್ ಸುವರ್ಣ -Vishwanews24

ಉಡುಪಿ: ಜಿಲ್ಲಾಡಳಿತ ಅನುಮತಿ ನೀಡಿದರೆ ಮಲ್ಪೆ ದ್ವೀಪದಲ್ಲಿ ಪೇಜಾವರ ಶ್ರೀಗಳ ಭವ್ಯ ಸ್ಮಾರಕವನ್ನು ಸಾರ್ವಜನಿಕ ಸಹಕಾರದೊಂದಿಗೆ ನಿರ್ಮಿಸಲಿದ್ದೇವೆ ಎಂದು ಮೀನುಗಾರ ಮುಖಂಡ ಯಶಪಾಲ ಸುವರ್ಣ  ತಿಳಿಸಿದ್ದಾರೆ.

ಇತ್ತೀಚೆಗೆ ಕೃಷ್ಣೈಕ್ಯರಾದ  ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಸಂಪೂರ್ಣ ಜೀವಿತವನ್ನು ಸಮಾಜದ ಉನ್ನತಿಗೆ ಮುಡಿಪಾಗಿಟ್ಟ ಹಿರಿಯರು.ಸಮಾಜದ ಅವರ ಬದುಕಿನಿಂದ ನಮ್ಮ ಮುಂದಿನ ಪೀಳಿಗೆ ಪ್ರೇರಣೆ ಪಡೆಯ ಬೇಕಾದರೆ ಅವರ ಭವ್ಯ ಸ್ಮಾರಕವೊಂದು ನಿರ್ಮಾಣವಾಗಬೇಕು. ಉಡುಪಿಯ ಪ್ರಸಿದ್ಧ ಪ್ರವಾಸಿತಾಣವಾಗಿರುವ ತೋನ್ಸೆಪಾರ್ ದ್ವೀಪದಲ್ಲಿ ಪೂಜ್ಯ ಶ್ರೀಗಳ ಸುಂದರ ಪುತ್ಥಳಿ ಮತ್ತು ಅವರ ಬದುಕಿನ ಸಾಧನೆಗಳನ್ನು ಬಿಂಬಿಸುವ ಪುಟ್ಟ ಆಡಿಟೋರಿಯಂ ಒಂದನ್ನು ರಚಿಸಲು ನಾವು ಸಿದ್ಧರಿದ್ದು ಜಿಲ್ಲಾಡಳಿತ ಈ ಕಾರ್ಯಕ್ಕೆ ಅನುಮತಿ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.

ಸಂತನ ಬದುಕು ಲೋಕದ ಹಿತಕ್ಕೆ ಎಂಬ ಮಾತನ್ನು ಅಕ್ಷರಶಃ ಪಾಲಿಸಿದವರು ಪೇಜಾವರ ಶ್ರೀಗಳು.ಅವರು ಕೇವಲ ಮಧ್ವಮತದ ಪ್ರಸಾರಕ್ಕಷ್ಟೇ ಸೀಮಿತಗೊಳ್ಳದೆ ಎಲ್ಲಾ ಸಮಾಜಗಳ ಸಂಘಟನೆಗೆ ಮಹತ್ವ ನೀಡುತ್ತಾ ರಾಷ್ಟ್ರೀಯ ವಿಚಾರಗಳಿಗೆ ಸ್ಪಂದಿಸುತ್ತಾ ತನ್ನ ಇಳಿ ವಯಸ್ಸಿನಲ್ಲೂ ಪಾದರಸದಂತೆ ಸಂಚರಿಸುತ್ತಿದ್ದವರು. ಅಂತರಾಷ್ಟ್ರೀಯ ಸ್ತರದಲ್ಲಿ ಉಡುಪಿಯ ಕೀರ್ತಿಯನ್ನು ಎತ್ತಿ ಹಿಡಿದವರು ಪೇಜಾವರ ಶ್ರೀಗಳು. ಸರಳ ಬದುಕನ್ನು ನಡೆಸಿದ ಯತಿಶ್ರೇಷ್ಠರು ಅನೇಕ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕ ಕೇಂದ್ರಗಳನ್ನು ಗೋಶಾಲೆಗಳನ್ನು ಬಿಟ್ಟು ಹೋಗಿದ್ದಾರೆ.

ಪೇಜಾವರಶ್ರೀಗಳ ಸ್ಮಾರಕ ನಿರ್ಮಾಣದಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದ್ದು ಪೇಜಾವರ ಶ್ರೀಗಳ ಸ್ಮಾರಕ ರಚನೆಗೆ ಜಿಲ್ಲಾಡಳಿತ ತನ್ನ ಪೂರ್ಣ ಸಹಕಾರ ನೀಡಬೇಕು ಎಂದು ಅವರು  ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago