ಮೈಸೂರು: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕರ ನಡುವಿನ ಜಟಾಪಟಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕಿಯಿಸಿದ್ದಾರೆ. ಜಿಲ್ಲಾಧಿಕಾರಿ ಪರವಾಗಿ ಪ್ರತಾಪ್ ಸಿಂಹ ಭರ್ಜರಿಯಾಗಿ ಮಾತನಾಡಿದ್ದಾರೆ.
ಕ್ಷೇತ್ರದ ಜನರ ಸಮಸ್ಯೆ ಕೇಳಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಕ್ಷೇತ್ರವನ್ನು ಯಾವ ಶಾಸಕರು ಹಾಗೂ ಎಂಪಿಗೂ ಬರೆದುಕೊಟ್ಟಿರುವುದಿಲ್ಲ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಮುಗಿದ ಮೇಲೆ ನಾನು ಕೂಡ ಜನರ ಬಳಿ ಹೋಗುತ್ತೇನೆ. ಯಾರು ತಡೆಯುತ್ತಾರೆ ನೋಡೋಣ ಎಂದು ಗುಡುಗಿದ್ದಾರೆ.
ನಾಲ್ಕು ಜನ ಶಾಸಕರು ಒಟ್ಟಾಗಿ ಡಿಸಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಹೆದರಿಸುತ್ತಿದ್ದೀರಾ? ನೀವೂ ಹೆದರಿಸಿದರೆ ನಾವು ಹೆದರಬೇಕಾ? ನೀವು ಜನರ ಸಮಸ್ಯೆ ಬಗೆಹರಿಸಿದ್ದರೆ, ಜನ ಯಾಕೆ ಡಿಸಿ ಬಳಿ ಕಷ್ಟ ಹೇಳಿಕೊಂಡು ಹೋಗುತ್ತಿದ್ದರು? ಎಂದು ಶಾಸಕರನ್ನು ಪ್ರಶ್ನಿಸಿದ್ದಾರೆ.
ಶಾಸಕರು, ಸಂಸದರು ಎಂಬುದು ಜನರ ಕೆಲಸ ಮಾಡಲು ಇರುವ ಹುದ್ದೆ ಅಷ್ಟೇ. ಡಿಸಿ ಜನರ ಬಳಿಗೆ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದಾರೆ. ಇದನ್ನು ಎಲ್ಲರೂ ಬೆಂಬಲಿಸಬೇಕು. ನೀವು ಮಾಡಲು ಆಗದ ಕೆಲಸವನ್ನ ಡಿಸಿ ಮಾಡುತ್ತಿದ್ದಾರೆ, ಮಾಡಲು ಬಿಡಿ ಎಂದು ಕಟುವಾಗಿ ಹೇಳಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…