Featured

ಜಿಲ್ಲಾಧಿಕಾರಿಯವರು ಆರ್‌ಎಸ್ಎಸ್ ಧ್ವಜ ಹಿಡಿದು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ್ದು ಸಂವಿಧಾನಿಕ ತಪ್ಪು : ಸುರೇಶ್ ಶೆಟ್ಟಿ ಬನ್ನಂಜೆ – vishwanews24

ಜಿಲ್ಲಾಧಿಕಾರಿಯವರು ಆರ್‌ಎಸ್ಎಸ್ ಧ್ವಜ ಹಿಡಿದು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ್ದು ಸಂವಿಧಾನಿಕ ತಪ್ಪು : ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಿ ಆರ್ ಎಸ್ ಎಸ್ ಧ್ವಜವನ್ನು ಹಿಡಿದು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ ಉಡುಪಿಯ ಜಿಲ್ಲಾಧಿಕಾರಿ ಮಠದ ಆಡಳಿತಾಧಿಕಾರಿಯೇ? ಅಥವಾ ಉಡುಪಿ ನಗರಸಭೆಯ ಆಡಳಿತಾಧಿಕಾರಿಯೇ ?ಎಂಬುದನ್ನು ಅವರೇ ಸ್ಪಷ್ಟನೆ ನೀಡಬೇಕಾಗಿದೆ.

ಇದುವರೆಗಿನ ಉಡುಪಿ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ಜಿಲ್ಲಾಧಿಕಾರಿಗಳು ಆರ್ ಎಸ್ ಧ್ವಜವನ್ನು ಆರಿಸಿರಲಿಲ್ಲ. ಆದರೆ ಈ ಬಾರಿ ಉಡುಪಿಯ ಜಿಲ್ಲಾಧಿಕಾರಿಯವರು ಆರ್‌ಎಸ್ಎಸ್ ಧ್ವಜವನ್ನು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ್ದು ಸಂವಿಧಾನಿಕ ತಪ್ಪು. ಜಿಲ್ಲಾಧಿಕಾರಿ ತಾವು ಒಬ್ಬರು ಸರಕಾರದ ಪ್ರತಿನಿಧಿ ಎಂಬುದನ್ನು ಮರೆತಂತೆ ಇದೆ.
ನಮ್ಮ ದೇಶಕ್ಕೆ ನಮ್ಮ ರಾಷ್ಟ್ರಧ್ವಜ ಹೊರತು ಬೇರೆ ಯಾವುದೇ ಧ್ವಜಗಳು ಇರುವುದಿಲ್ಲ. ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರುಗಳು ಕೇವಲ ಮತಗಳಿಸಲಿಕ್ಕೋಸ್ಕರ ಈ ರೀತಿಯಾಗಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿದ್ದಾರೆ. ಮಾತ್ರವಲ್ಲದೆ ಉಡುಪಿಯ ಜಿಲ್ಲಾಧಿಕಾರಿಯವರನ್ನು ಕೂಡ ತಮ್ಮ ಹಿಂದುತ್ವದ ಬಲೆಯೊಳಗೆ ಸಿಲುಕಿರುತ್ತಾರೆ ಎಂಬುದು ಇಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ನಮ್ಮ ಬಿಜೆಪಿಯ ನಾಯಕರುಗಳಿಗೆ ಗೋಚರಿಸುತ್ತಿರುವುದು ಪಾಕಿಸ್ತಾನ ಧ್ವಜ ಮತ್ತೆ ಕಾಂಗ್ರೆಸ್ ಪಕ್ಷ. ಇದರಿಂದಾಗಿ ಇವರು ಜನರನ್ನು ಮೋಸಗೊಳಿಸಿ ತಮ್ಮ ಗೆಲುವನ್ನು ಸಾಧಿಸಲು ಹೊರಟಿರುತ್ತಾರೆ. ಇಂತಹ ದುಷ್ಟಶಕ್ತಿಗಳಿಗೆ ಇನ್ನು ಮುಂದೆ ನಮ್ಮ ಜಿಲ್ಲೆಯ ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಹಾಗೂ ಉಡುಪಿ ನಗರಸಭೆಯ ನಾಮ ನಿರ್ದೇಶಕ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago