ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ – Vishwanews24

Featured, ರಾಜ್ಯ ನ್ಯೂಸ್

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ 

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಆದರೆ ಚಿತ್ರದುರ್ಗದಲ್ಲಿ ಜೋಡಿಯೊಂದು ಆಪರೇಷನ್ ಥಿಯೇಟರ್​ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

Leave a Reply