ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಆದರೆ ಚಿತ್ರದುರ್ಗದಲ್ಲಿ ಜೋಡಿಯೊಂದು ಆಪರೇಷನ್ ಥಿಯೇಟರ್‌ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…