Featured

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ – ವೈದ್ಯರನ್ನು ಸೇವೆಯಿಂದ ವಜಾಗೊಳಿಸಿದ ಆರೋಗ್ಯ ಸಚಿವರು – Vishwanews24

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ – ವೈದ್ಯರನ್ನು ಸೇವೆಯಿಂದ ವಜಾಗೊಳಿಸಿದ ಆರೋಗ್ಯ ಸಚಿವರು

ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ ..

ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ : ಎಚ್ಚರಿಕೆ ನೀಡಿದ ದಿನೇಶ್ ಗುಂಡೂರಾವ್

ಬೆಂಗಳೂರು : ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಶೂಟ್ ನಡೆಸಿದ ವೈದ್ಯರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಗುತ್ತಿಗೆ ವೈದ್ಯರೋರ್ವರು ತಮ್ಮ ಭಾವೀ ಪತ್ನಿಯ ಜೊತೆ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ವೈರಲ್ ಆಗಿದ್ದ ವೀಡಿಯೋ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣ x ನಲ್ಲಿ ಪೋಸ್ಟ್ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, “ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ” ಎಂದಿರುವ ಅವರು, ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ, ಎಂದು ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನು ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರು ಗಮನಹರಿಸಬೇಕು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 hour ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

4 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

5 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

7 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

7 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

10 hours ago