Featured

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಪೊಲೀಸ್ ಭದ್ರತೆ ವಾಪಾಸು ಪಡೆಯುವಂತೆ  ಎಸ್ಪಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಮನವಿ – Vishwanews24

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಪೊಲೀಸ್ ಭದ್ರತೆ ವಾಪಾಸು ಪಡೆಯುವಂತೆ  ಎಸ್ಪಿಗೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಮನವಿ

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಗಳನ್ನು ಶೀಘ್ರವಾಗಿ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಮನವಿ ಮಾಡಿತು.

ಕ್ಷುಲ್ಲಕ ವಿಚಾರಕ್ಕಾಗಿ ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಬಂದು ಘೋಷಣೆ ಕೂಗಿದ ಮಾತ್ರಕ್ಕೆ ಕಾಂಗ್ರೆಸ್ ಕಛೇರಿಗಾಗಲಿ ಅಥವಾ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಿಗಾಗಲಿ ಯಾವುದ ಭೀತಿ ತಲೆದೋರಿಲ್ಲ. ಮುನ್ನೆಚ್ಚರಿಕೆಯ ಕಾರಣದಿಂದ ಉಡುಪಿ ಪೊಲೀಸರು ಉಡುಪಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಪೊಲೀಸ್ ಭದ್ರತೆಯನ್ನು ಒದಗಿಸಿದ್ದನ್ನು ನಾವು ಧನ್ಯತಾ ಪೂರ್ಣವಾಗಿ ಸ್ವೀಕರಿಸುವದರ ಜೊತೆ ಕಛೇರಿಗೆ ಭದ್ರತೆ ಒದಗಿಸಿದ ಪೊಲೀಸ್ ಇಲಾಖೆಗೆ ಧನ್ಯವಾದ ಸಲ್ಲಿಸುತ್ತೇವೆ.

ಉಡುಪಿ: ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆಗಾಗಿ ಈ ಬಾರಿಯೂ ಅಷ್ಟಮಿಗೆ ವೇಷ ಧರಿಸಲು ಸಿದ್ಧತೆ ನಡೆಸುತ್ತಿದ್ದಾರೆ ರವಿ ಕಟಪಾಡಿ – Vishwanews24

ಆದರೂ ಜನರ ಭದ್ರತೆಗೆ ಹಾಗೂ ಸುವ್ಯವಸ್ತೆಗೆ ಮೀಸಲಿರುವ ಪೊಲೀಸರನ್ನು ಯಾವುದೋ ಕಿಡಿಗೇಡಿಗಳ ದುರ್ವತ್ರನೆಯನ್ನು ಪರಿಗಣಿಸಿ, ಕಾಂಗ್ರೆಸ್ ಪಕ್ಷದ ಕಛೇರಿಗೆ ಭದ್ರತೆಯ ನೆಪದಲ್ಲಿ ಅನಾವಶ್ಯಕವಾಗಿ ಉಪಯೋಗಿಸುವುದು ನಾವು ಜನರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಂಡಂತ ಹಾಗಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಟರು ಕಾಂಗ್ರೆಸ್ ಪಕ್ಷದ ಕಛೇರಿಗೆ ನೀಡಿದ ಎಂದು ಭದ್ರತಾ ಸಿಬಂದಿಗಳನ್ನು ಶೀಘ್ರವಾಗಿ ತೆರವು ಮಾಡಿಸಬೇಕು ಹಾಗೂ ಅಂತಹ ಸಂದರ್ಭ ಬಂದಾಗ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರಕ್ಷಣೆಗೆ ಹಾಗೂ ಕಾಂಗ್ರೆಸ್‌ ಕಛೇರಿಯ ಭದ್ರತೆಗೆ ತಮ್ಮ ಜೀವ ಪಣ ಇಟ್ಟು ಕೆಲವು ವಿಕೃತ ಶಕ್ತಿಗಳ ವಿರುದ್ಧ ಹೋರಾಡಲು ಸಿದ್ಧರಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎಂ ಏ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸದಾಶಿವ ಪೂಜಾರಿ, ಪ್ರಚಾರ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಮತಾ ಶೆಟ್ಟಿ, ಮಾಜಿ ನಗರಸಭಾ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಕಡೇಕಾರ್ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ನವೀನ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಸುಕನ್ಯಾ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸತೀಶ್ ಕುಮಾರ್ ಮಂಚಿ, ಸಾಯಿರಾಜ್ ಕಿದಿಯೂರು, ಭರತ್ ಮಣಿಪಾಲ್, ಪ್ರಮೀಳಾ ಸುವರ್ಣ, ಶಾಲಿನಿ ಪುರಂದರ್ ಸಾಲ್ಯಾನ್, ಗಣೇಶ್, ನಾರಾಯಣ್ ಕುಂದರ್, ಹರೀಶ್ ಕಿಣಿ, ನರಸಿಂಹಮೂರ್ತಿ, ಸತೀಶ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಹಮ್ಮದ್, ಸಂಜಯ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದ ರಾಜ್ಯ ಸರ್ಕಾರ – Vishwanews24

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

30 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

34 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago