Featured

ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ : ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ -Vishwanews24

ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ : ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ -Vishwanews24

ಉಡುಪಿ: “ಜಿಲ್ಲೆಯಲ್ಲಿ ರೋಗ ಲಕ್ಷಣದ ಕೊರೊನಾ ವೈರಸ್ ಪ್ರಕರಣಗಳು ಶೇ. 9 ರಷ್ಟಿದೆ. ಆಸ್ಪತ್ರೆಯಲ್ಲಿ ಸುಮಾರು 43 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 176 ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. 219 ಸಕ್ರಿಯ ಪ್ರಕರಣಗಳಾಗಿವೆ. ಮೂರು ಜನರನ್ನು ಐಸಿಯುನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ 87 ಐಸಿಯು ಬೆಡ್‌ಗಳು ಖಾಲಿ ಇವೆ. ಹಾಗೆಯೇ ಕಳೆದ 20 ದಿನಗಳಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ” ಎಂದು ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೆಚ್ಚಿನ ರೋಗಿಗಳು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ರೋಗಲಕ್ಷಣವುಳ್ಳ ಪ್ರಕರಣಗಳಿಗಿಂತ ರೋಗಲಕ್ಷಣವಿಲ್ಲದ ಪ್ರಕರಣಗಳು ಅಧಿಕವಾಗಿದೆ. ಪಾಸಿಟಿವ್‌ ಪ್ರಕರಣಗಳು ಕಡಿಮೆಯಾಗುತ್ತಿದೆ. ರಾಷ್ಟ್ರೀಯ ಅಂಕಿಅಂಶಗಳನ್ನು ಹೋಲಿಸಿದಾಗ, ಕರ್ನಾಟಕವು ಮಹಾರಾಷ್ಟ್ರದ ನಂತರ ಅಂದರೆ ಎರಡನೇ ಸ್ಥಾನದಲ್ಲಿದೆ. ನಿನ್ನೆಯವರೆಗೆ ಕರ್ನಾಟಕದಲ್ಲಿ 8.83 ಲಕ್ಷ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು ಚೇತರಿಕೆ ಪ್ರಮಾಣವು ಶೇ. 96 ರಷ್ಟಿದೆ. ದೇಶದಲ್ಲಿ ಸಾವಿನ ಪ್ರಮಾಣವು ಶೇಕಡಾ 1.6 ಕ್ಕೆ ಇಳಿದಿದೆ. ಪ್ರತಿ ಮಿಲಿಯನ್‌ಗೆ 1.67 ಲಕ್ಷ ಪರೀಕ್ಷೆ ನಡೆಸಲಾಗಿದೆ” ಎಂದು ಹೇಳಿದರು.

“ರವಿವಾರದವರೆಗೆ 22,675 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕೊರೊನಾವೈರಸ್ ಅಂಕಿಅಂಶಗಳಿಗೆ ಹೋಲಿಸಿದರೆ ಒಟ್ಟು ಚೇತರಿಕೆ ಪ್ರಮಾಣ 98.3% ರಷ್ಟಿದೆ. ಕೊರೊನಾ ಸಾವಿನ ಪ್ರಮಾಣ 0.8% ವಿದೆ. ಪ್ರತಿದಿನ ಸರಾಸರಿ 2,500 ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಕಳೆದ ಎರಡು ತಿಂಗಳಿನಿಂದ, ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಒಟ್ಟು ಸಕಾರಾತ್ಮಕ ಪ್ರಕರಣಗಳು ಆಗಸ್ಟ್‌ನಲ್ಲಿ 400 ಆಗಿದ್ದವು. ಬಳಿಕ ದಿನಕ್ಕೆ 200 ಕೊರೊನಾ ಪ್ರಕರಣಕ್ಕೆ ಇಳಿದಿದೆ. ಕಳೆದ ಎರಡು ತಿಂಗಳುಗಳಿಂದ ಕೊರೊನಾ ಪಾಸಿಟಿವ್ ದರವು ಶೇ. 25-30ರಷ್ಟಿದೆ. ಆದರೆ ನವೆಂಬರ್‌ನಲ್ಲಿ ಪಾಸಿಟಿವ್‌ ಪ್ರಕರಣಗಳ ಪ್ರಮಾಣವು ಶೇ. 1 ಕ್ಕೆ ಇಳಿದಿದೆ. ನವೆಂಬರ್‌ನಲ್ಲಿ ಸರಾಸರಿ 20 ಕೊರೊನಾ ಪ್ರಕರಣಗಳು ದೃಢಪಡುತ್ತಿದೆ” ಎಂದು ಹೇಳಿದರು.

“ಆರಂಭದಲ್ಲಿ, ಇತರ ಸ್ಥಳಗಳಿಂದ ವಲಸೆ ಬಂದ ಜನರಲ್ಲಿ ಕೊರೊನಾ ಪಾಸಿಟಿವ್‌ ವರದಿಯಾಗಿವೆ. ಜುಲೈ ನಂತರ ಸ್ಥಳೀಯ ಜನರಲ್ಲಿ ಕೊರೊನಾ ದೃಢಪಟ್ಟಿದೆ. ಗರಿಷ್ಠ ಹಂತಕ್ಕೆ ತಲುಪಿದ ಬಳಿಕ ವೈರಸ್ ಹರಡುವ ಪ್ರಮಾಣವು ನಿಯಂತ್ರಣಕ್ಕೆ ಬಂದಿದೆ” ಎಂದರು.

ಇನ್ನು ”ನವೆಂಬರ್ 7 ರಂದು ಕೊರೊನಾ ರೋಗಿಯೋರ್ವರು ಸಾವನ್ನಪ್ಪಿದ್ದು ಇದು ಕೊನೆಯ ಕೊರೊನಾ ಸಾವಿನ ಪ್ರಕರಣವಾಗಿದೆ. ಬಳಿಕ 20 ದಿನಗಳಿಂದ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ”  ಎಂದು ತಿಳಿಸಿದರು.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago