Featured

ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಉತ್ತಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಉತ್ತಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ,: ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮವು ಅತ್ಯುತ್ತ್ತಮವಾಗಿ ನಡೆಯುತ್ತಿದ್ದು, ಸರ್ಕಾರದ ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ನಗರದ ಅಮ್ಮಣಿ ರಾಮಣ್ಣ ಹಾಲ್ ನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾಕರಣ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಮಾತನಾಡಿದರು.

ಕೋವಿಡ್ ನ ಅಪಾಯದಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರೀಕರೂ ತಪ್ಪದೇ ಲಸಿಕೆ ಪಡೆಯಬೇಕು ಎಂದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಈಗಾಗಲೇ 79% ಪ್ರಥಮ ಡೋಸ್ ಲಸಿಕೆ ನೀಡಲಾಗಿದೆ ಎಂದರು.

ಅಮ್ಮಣ್ಣಿ ರಾಮಣ್ಣ ಹಾಲ್ ನಲ್ಲಿನ ಲಸಿಕಾ ಕೇಂದ್ರದಲ್ಲಿ 500 ಮಂದಿ ಸಾರ್ವಜನಿಕರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿದ್ದು, ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿದ್ದು, ಸ್ಥಳೀಯ ನಗರಸಭಾ ಸದಸ್ಯರು ಸಹ ನಾಗರೀಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಕೋವಿಡ್ ಲಸಿಕಾ ನೋಡೆಲ್ ಅಧಿಕಾರಿ ಡಾ.ಎಂ.ಜಿ.ರಾಮ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

3 days ago