ಮಂಗಳೂರು : ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಸಾಧಿಸಿರುವ ವಿಜಯವನ್ನು ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್ `ಹಿಂದೂ ಹುತಾತ್ಮ’ರಿಗೆ ಸಮರ್ಪಿಸಿದ್ದಾರೆ.
ಸುದ್ದಿಗಾರರೊಡನೆ ಮಾತನಾಡಿದ ನಳಿನ್, ಪಕ್ಷದ ಸಂಘಟಿತ ಹೋರಾಟದಿಂದ ವಿಜಯ ದಕ್ಕಿದೆ ಎಂದರಲ್ಲದೆ “ಕಳೆದೊಂದು ವರ್ಷದ ಅವಧಿಯಲ್ಲಿ ಹತ್ಯೆಗೀಡಾದ ಪಕ್ಷದ ಹಾಗೂ ಸಂಘ ಪರಿವಾರದ ಕಾರ್ಯಕರ್ತರಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ ಹಾಗೂ ದೀಪಕ್ ರಾವ್ ಅವರಿಗೆ ಈ ಗೆಲುವು ಸಮರ್ಪಿತ” ಎಂದರು. “ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರ, ಕೋಮುವಾದ ಹಾಗೂ ಗೂಂಡಾ ರಾಜಕಾರಣದ ವಿರುದ್ಧ ಜನತೆ ನೀಡಿದ ತೀರ್ಪು ಇದಾಗಿದೆ. ಬಿಜೆಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಶ್ರಮಿಸುವುದು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ, ಸಾಗರಮಾಲ, ಭಾರತ್ ಮಾಲಾ, ವಿಶ್ವ ದರ್ಜೆಯ ರೈಲು ನಿಲ್ದಾಣ ಮುಂತಾದ ಯೋಜನೆಗಳು ನೆನೆಗುದಿಗೆ ಬಿದ್ದಿವೆ” ಎಂದು ಅವರು ದೂರಿದ್ದಾರೆ.
ಕರಾವಳಿ ಜಿಲ್ಲೆಗಳು ಬಿಜೆಪಿಯ ಭದ್ರಕೋಟೆಯಾಗಿವೆ ಎನ್ನುವುದನ್ನು ಈ ಜಯ ಸಾಬೀತುಪಡಿಸಿದೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜಿಲ್ಲಾ ಭೇಟಿ ಕೂಡ ಪಕ್ಷಕ್ಕೆ ಬಹಳ ಸಹಾಯಕವಾಗಿತ್ತು. ಪ್ರತಿಯೊಬ್ಬ ಅಭ್ಯರ್ಥಿಯನ್ನು ಕೇಂದ್ರ ಚುನಾವಣಾ ಸಮಿತಿ ಸೂಕ್ತ ಪರಾಮರ್ಶೆಯ ನಂತರ ಆಯ್ಕೆ ಮಾಡಿತ್ತು ಎಂದೂ ಅವರು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…