Featured

ಜಿಲ್ಲೆಯಲ್ಲಿ 10000 ಜನರಿಂದ ಯೋಗಾಭ್ಯಾಸ ಕಾರ್ಯಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಜಿಲ್ಲೆಯಲ್ಲಿ 10000 ಜನರಿಂದ ಯೋಗಾಭ್ಯಾಸ ಕಾರ್ಯಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, : ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ, ಜಿಲ್ಲೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ 10000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ,ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಗಳನ್ನಾಗಿಸಿಕೊಳ್ಳುವುದರೊಂದಿಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ , ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.

ಯೋಗಾಭ್ಯಾಸಕ್ಕೆ ಸಾರ್ವಜನಿಕರು ಸೇರಲು ಅನುಕೂಲವಾಗುವ ಸೂಕ್ತ ಸ್ಥಳವನ್ನು ಗುರುತಿಸಿ, ಅಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಕೈಗೊಳ್ಳಬೇಕು, ಕಾರ್ಯಕ್ರಮದಲ್ಲಿ ಜಿಲ್ಲೆಯ ಯೋಗ ಸಂಸ್ಥೆಗಳು, ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಕಾರವನ್ನು ಪಡೆಯುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಣಿ ಮಾಡಲು, ಆನ್‌ಲೈನ್ ನೊಂದಣಿಯನ್ನು register@yogathon2022.com ಹಾಗೂ ಆಫ್‌ಲೈನ್ ನೊಂದಣಿಯನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮಾಡಬಹುದಾಗಿದೆ ಎಂದರು.

ಯುವಜನರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಸಹಕಾರ ಪಡೆಯಬೇಕು.ಯೋಗ ತರಬೇತಿ ನೀಡಲು ಯೋಗ ಶಿಕ್ಷಕರನ್ನು ಗುರುತಿಸಬೇಕು, ಕಾರ್ಯಕ್ರಮಕ್ಕೆ ಶಿಬಿರಾರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಉಡುಪಿ ಜಿಲ್ಲೆ ಘೋಷಣೆಯಾಗಿ 25 ವರ್ಷಗಳು ಸಂಪೂರ್ಣವಾಗುತ್ತಿದ್ದು, ಇದರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago