ಉಡುಪಿ, : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ರಿಂದ 59 ವರ್ಷದೊಳಗಿನ ಸಾರ್ವಜನಿಕರಿಗೆ ಸೆಪ್ಟಂಬರ್ 30 ರ ಒಳಗೆ 8 ಲಕ್ಷ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಷ್ಟಿçÃಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2 ನೇ ಡೋಸ್ ಲಸಿಕೆ ನೀಡುವಲ್ಲಿ ಶೇಕಡಾ 100% ಸಾಧನೆ ಆಗಿದ್ದು, ಪ್ರಸ್ತುತ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದರು.
ಜಿಲ್ಲೆಯ ಸಾರ್ವಜನಿಕರು ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್‌ನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದಿದ್ದ ಕಾರಣ ಕೋವಿಡ್ 3 ನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಕರಣಗಳು ಕಂಡುಬರಲಿಲ್ಲ. ಆದ್ದರಿಂದ ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಪ್ಪದೇ ಮುನ್ನೆಚ್ಚರಿಕಾ ಡೋಸ್ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ವಿವಿಧ ಸಂಘ ಸಂಸ್ಥೆಗಳು ಹಾಗೂ ನಾಗರೀಕರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡಿದ್ದು, ಮುನ್ನೆಚ್ಚರಿಕಾ ಡೋಸ್ ನೀಡಿಕೆಯಲ್ಲಿ 100% ಪ್ರಗತಿ ಸಾಧಿಸುವಲ್ಲಿ ಕೂಡಾ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ. ಕೀರ್ತಿನಾಥ ಬಲ್ಲಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ವಂದಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…