ಉಡುಪಿ: ಜಿಲ್ಲೆಯ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಮಹೋತ್ಸವ ಸಂಪನ್ನಗೊಂಡಿದ್ದು ವೈಭವದ ಮೆರವಣಿಗೆ ನಡೆಯಿತು. ಕಾಪು ಕಡಲ ತೀರದಲ್ಲಿ ನವದುರ್ಗೆಯರಿಗೆ ಗಂಗಾವತಿ ನಡೆಸಿ, ಸಾವಿರಾರು ಜನರ ಸಮ್ಮುಖದಲ್ಲಿ ಜಲಸ್ತಂಭನ ಮಾಡಲಾಯಿತು.
ದಕ್ಷಿಣ ಭಾರತದ ಪ್ರಸಿದ್ಧ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವನ್ನು ವೈಭವದಿಂದ ಆಚರಿಸಲಾಗಿತ್ತು. ನವ ದುರ್ಗೆಯರ ಮೂರ್ತಿಯನ್ನು 9 ದಿನ ಆರಾಧಿಸಿ, ಇಂದು ವಿಸರ್ಜನಾ ಮೆರವಣಿಗೆ ಮಾಡಲಾಯಿತು. ಸಮುದ್ರ ತೀರದಲ್ಲಿ ನವದುರ್ಗ ವಿಸರ್ಜನೆ ವಿಶೇಷವಾಗಿತ್ತು. ಇದಕ್ಕೂ ಮುನ್ನ ಹೆಲಿಕಾಪ್ಟರ್‌ನಲ್ಲಿ ಮೂರು ಸುತ್ತು ಪುಷ್ಪವೃಷ್ಟಿ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ನೂತನ ತಂತ್ರಜ್ಞಾನದ ಹೆಲಿಕಾಪ್ಟರ್ ನವ ದುರ್ಗೆಯರ ಸಮೀಪಕ್ಕೆ ಬಂದು ಮೂರು ಬಾರಿ ಪುಷ್ಪಾರ್ಚನೆ ಮಾಡಿದ್ದು ವಿಶೇಷವಾಗಿತ್ತು.
ಮೆರವಣಿಗೆಯ ವೈಭವದಲ್ಲಿ 80 ಕ್ಕಿಂತ ಹೆಚ್ಚು ಟ್ಯಾಬ್ಲೋಗಳು ಭಾಗಿಯಾದವು. ಗಣಪತಿ ಈಶ್ವರ ನವದುರ್ಗೆಯರು ಹನುಮಂತ ಮೂಷಿಕದ ಮೇಲೆ ಸಂಚಾರ ಹೊರಟ ವಿಘ್ನ ವಿನಾಶಕ ಕಾಳಿಂಗ ಮರ್ಧನ ಕೃಷ್ಣ, ಬಕಾಸುರ ರಥದಲ್ಲಿ ಸಂಚರಿಸುವ ಕೃಷ್ಣ ಅರ್ಜುನರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹುಲಿ ವೇಷ ಕುಣಿತ ವಿವಿಧ ಭಜನಾ ತಂಡಗಳು ಭಾಗಿಯಾದವು. ಇದನ್ನೂ ಓದಿ: ಉಡುಪಿ: ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ.. ದೂರು ದಾಖಲಿಸುವಂತೆ ವಿವಿಧ ಸಂಘಟನೆಗಳಿಂದ ಎಸ್ಪಿಗೆ ಮನವಿ – Vishwanews24
ಕಳೆದ ಹತ್ತು ದಿನದಲ್ಲಿ ಸುಮಾರು 5 ಲಕ್ಷ ಜನ ಭಕ್ತರು ಶ್ರೀ ಕ್ಷೇತ್ರ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವರ ದರ್ಶನ ಮತ್ತು ಪ್ರಸಾದವನ್ನು ಸ್ವೀಕರಿಸಿದ್ದಾರೆ. ಮಹಾಲಕ್ಷ್ಮಿ ದೇವಸ್ಥಾನದಿಂದ ಹೆಜಮಾಡಿ ಟೋಲ್‍ವರೆಗೆ ಅಲ್ಲಿಂದ ಕಾಪುವಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿದೆ. ಸುಮಾರು 25 kmಗಳ ಬೃಹತ್ ಮೆರವಣಿಗೆಯನ್ನು ಕೈಗೊಂಡು ಜಿಲ್ಲೆಯಲ್ಲೇ ಅತಿ ದೊಡ್ಡ ವೈಭವದ ಶೋಭಾ ಯಾತ್ರೆ ಎಂಬ ಹೆಗ್ಗಳಿಕೆಗೆ ಉಚ್ಚಿಲ ದಸರಾ ಪಾತ್ರವಾಗಿದೆ.
ರಾತ್ರಿ ಎರಡು ಗಂಟೆಯವರೆಗೂ ಕಾಪು ಕಡಲತೀರದವರೆಗೆ ನವ ದುರ್ಗೆಯರ ವೈಭವದ ಮೆರವಣಿಗೆ ನಡೆಯಿತು. ಅಲ್ಲಲ್ಲಿ ನಿಂತು ಜನ ದೇವರಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಿದರು. ಮಲ್ಪೆ ಕಡಲ ತೀರದಲ್ಲಿ ಸಾವಿರಾರು ಜನ ಭಕ್ತ ಸಮುದಾಯದ ನಡುವೆ ಸಾಲಾಗಿ ನವ ದುರ್ಗೆಯರ ಮೂರ್ತಿಯನ್ನು ಇಟ್ಟು ಗಂಗರತಿ ಸಲ್ಲಿಸಲಾಯಿತು. 9 ದೇವಿಯರನ್ನು ಏಕಕಾಲದಲ್ಲಿ ಜಲ ಸ್ತಂಭ ಮಾಡಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…