Featured

ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದರೆ ಮಾತ್ರ ಹಿಂದೂ ಕಾರ್ಯಕರ್ತರ ರಕ್ಷಣೆ ಸಾಧ್ಯ : ಯಶ್ ಪಾಲ್ ಸುವರ್ಣ ಆಕ್ರೋಶ

ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದರೆ ಮಾತ್ರ ಹಿಂದೂ ಕಾರ್ಯಕರ್ತರ ರಕ್ಷಣೆ ಸಾಧ್ಯ : ಯಶ್ ಪಾಲ್ ಸುವರ್ಣ ಆಕ್ರೋಶ

ನಿರಂತರವಾಗಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಯಲ್ಲಿ ತೊಡಗಿರುವ ಮತಾಂಧ ಜಿಹಾದಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡುವ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಆಡಳಿತದಲ್ಲಿ  ರಾಜಾರೋಷವಾಗಿ ನಡೆಯುತ್ತಿದ್ದ ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರು ನಮ್ಮದೇ ಪಕ್ಷದ ಸರಕಾರದಲ್ಲೂ ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಬಲಿಯಾಗುತ್ತಿರುವುದು  ದುರದೃಷ್ಟಕರ.
ಈ ಬರ್ಬರ ಹತ್ಯೆಯಿಂದ ಮಾನಸಿಕವಾಗಿ ಹಿಂದೂ ಕಾರ್ಯಕರ್ತರ ಸ್ಥೈರ್ಯವನ್ನು ಕುಗ್ಗಿಸುವ ಹುನ್ನಾರದ ಭಾಗವಾಗಿ  ಹತ್ಯೆಗಳು ನಡೆಯುತ್ತಿದ್ದು,  ಪ್ರತಿಬಾರಿ ಈ ರೀತಿಯ ಹತ್ಯೆ ನಡೆದಾಗ ಕೇವಲ ಸಾಮಾಜಿಕ ಜಾಲತಾಣದಲ್ಲಿ ಸಾಂತ್ವನ, ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆಗೆ ಸೀಮಿತವಾಗದೇ ಹಂತಕರಿಗೆ ಇನ್ನೆಂದೂ ಈ ರೀತಿಯ ಕೃತ್ಯ ನಡೆಸದಂತೆ  ಅವರದೇ ಭಾಷೆಯಲ್ಲಿ ತಕ್ಕ ಉತ್ತರ ನೀಡಬೇಕಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಹಿಜಾಬ್ ವಿವಾದದಿಂದ ಆರಂಭಗೊಂಡು ನಡೆದ ಹಲವು ಘಟನೆಯಲ್ಲಿ ಸಮಾಜಘಾತಕ ಶಕ್ತಿಗಳನ್ನು ಗಟ್ಟಿಯಾಗಿ ಖಂಡಿಸಿದ ಶಿವಮೊಗ್ಗದ ಹರ್ಷ, ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರಿಗೆ ನಿರಂತರ ಬೆದರಿಕೆ ಪ್ರಕರಣಗಳನ್ನು ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿ ಈ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಯನ್ನು ನಿಷೇಧಿಸುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸುತ್ತಿದ್ದು ಸರಕಾರ ಈ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಂಡು ಹಿಂದೂ ಕಾರ್ಯಕರ್ತರಲ್ಲಿ ಭರವಸೆ ಮೂಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago