ಉಡುಪಿ

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :vishwnews24

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :Vishwanews24

ಕಾಪು: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ
ಜುಲೈ 24, 2022 – ಆದಿತ್ಯವಾರ ,ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ಬೆಳಗ್ಗೆ ಗಂಟೆ 9.30 – ಅಪರಾಹ್ನ 4ಗಂಟೆಯವರೆಗೆ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಜಿ‌ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.


ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಲಿದ್ದು ,ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಆಡಳಿತ ನಿರ್ದೆಶಕ ಪಿ‌ ರವೀಂದ್ರ ದಯಾನಂದ ಪೈ ದಿಕ್ಸೂಚಿ ಭಾಷಣ ಮಾಡಲಿದ್ದು ,ಅನಂತ ವೈದಿಕ ಕೇಂದ್ರ ಉಡುಪಿಯ ವೇದಮೂರ್ತಿ ಚಿಂಪಿ ರಾಮಚಂದ್ರ ಅನಂತ ಭಟ್ ಅಧ್ಯಕ್ಷತೆ ವಹಸಲಿದ್ದಾರೆ,ಮುಖ್ಯ ಅತಿಥಿಗಳಾಗಿ ಗಣೇಶ್ ಬೀಡಿ ಪಾಲುದಾರ ಗೋವಿಂದ ಜಗನ್ನಾಥ ಶೆಣೈ ,ಸಿಎ ಗೋಕುಲ್ ದಾಸ್ ಪೈ,ರತ್ನಾಕರ ಕಾಮತ್ ,ಪಿ ರಾಮಚಂದ್ರ ಶೆಣೈ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕಾರ್ಯಗಾರ ಹಾಗೂ ಭಾರತೀಯ ಸೇನೆಯಲ್ಲಿನ ಯುವ ಜನರಿಗೆ ಲಭ್ಯವಿರುವ ಅವಕಾಶಗಳು ಹಾಗೂ ಸವಾಲುಗಳು ಇದರ ಬಗ್ಗೆ ಶೈಕ್ಷಣಿಕ ಕಾರ್ಯಗಾರ ನಡೆಯಲಿದೆ ಅದರ ಜತೆಗೆ ಲೆಫ್ಟಿನೆಂಟ್ ಕರ್ನಲ್ ಅಜಿತ್ ವಿ ಭಂಡಾರ್ ಕಾರ್ ಅವರ ಜೀವನ ಸಾಧನೆಯ ಸಾಕ್ಷ್ಯ ಚಿತ್ರ ಮತ್ತು ಉಪನ್ಯಾಸ ಕಾರ್ಯಕ್ರಮ ಜರಗಲಿದೆ.
ಅದರ ಜತೆಗೆ ಎಸ್ ಎಸ್ ಎಲ್ ಸಿ ,ಪಿಯುಸಿ, ಸಿಇಟಿ,ನೀಟ್ ಮಾಡಲಾದ ಉನ್ನತ ವ್ಯಾಸಂಗದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಜಿಎಸ್ಬಿ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದ್ದು ಮತ್ತು ವಿದ್ಯಾಪೋಷಕ ನಿಧಿಯಿಂದ 500 ವಿದ್ಯಾರ್ಥಿಗಳಿಗೆ ಒಟ್ಟು 70 ಲಕ್ಷದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಇದಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ‌ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ, ಅಧ್ಯಕ್ಷ ಜಿ ಸತೀಶ್ ಹೆಗ್ಡೆ,ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಸಿ ಎ ಗೋಪಾಲಕೃಷ್ಣ ಭಟ್ ,ವಿದ್ಯಾಪೋಷಕ್ ಸ್ಕಾಲರ್ ಶಿಪ್ ಫಂಡ್ ನ ಅಧ್ಯಕ್ಷ ಎಸ್ ಎಸ್ ನಾಯಕ್,ಸಂಯೋಜಕ ವಿಜಯ್ ಕುಮಾರ್ ಶೆಣೈ  ,ಕಾಪು ಹರೀಶ್ ನಾಯಕ್,   ಉಪಸ್ಥಿತರಿದ್ದರು.

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

15 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago