Featured

ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ ; ಉಗ್ರರಿಗೆ ಎಚ್ಚರಿಕೆ ನೀಡಿದ ಭಾರತೀಯ ಸೇನೆ – Vishwanews24

ಶ್ರೀನಗರ: ‘ಕಾಶ್ಮೀರದಲ್ಲಿ ಯಾರಾದರೂ ಉಗ್ರರು ಗನ್ ಹಿಡಿದರೆ ಸೇನೆ ಅವರನ್ನು ಹತ್ಯೆ ಮಾಡುವುದು ಖಚಿತ. ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ’. ಕಾಶ್ಮೀರದಲ್ಲಿ ಉಗ್ರವಾದದ ದಾರಿ ಹಿಡಿದ ಯುವಕರಿಗೆ ಭಾರತೀಯ ಸೇನೆ  ಕೊನೆಯ ಎಚ್ಚರಿಕೆ ನೀಡಿದೆ.

ಕಳೆದ 5 ದಿನಗಳಲ್ಲಿ 45ಕ್ಕೂ ಅಧಿಕ ಯೋಧರನ್ನು ಕಳೆದುಕೊಂಡಿರುವ ಸೇನೆ, ಭಯೋತ್ಪಾದಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಕಾಶ್ಮೀರದಲ್ಲಿ ಇನ್ನು ಗನ್ ಹಿಡಿದರೆ ಹೊಡೆದು ಹಾಕುವುದು ನಿಶ್ಚಿತ. ಇದು ಸೇನೆಯ ಮನವಿ ಹಾಗೂ ಸಂದೇಶ ಎಂದು ಸೇನೆಯ ಹಿರಿಯ ಅಧಿಕಾರಿಗಳು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಶ್ಮೀರದ ತಾಯಂದಿರಲ್ಲಿ ಸೇನೆಯ ಮನವಿ ಏನೆಂದರೆ, ಭಯೋತ್ಪಾದಕ ಸಂಘಟನೆ ಸೇರಿರುವ ಮಕ್ಕಳಿಗೆ ಬುದ್ಧಿವಾದ ಹೇಳಿ, ಶರಣಾಗಲು ಮನವೊಲಿಸಿ. ತಾಯಂದಿರ ಜತೆಗೆ ಕುಟುಂಬ ಸದಸ್ಯರು ಹಾಗೂ ಸಮುದಾಯ ಕೂಡ ಉಗ್ರ ನಿಗ್ರಹ ಚಟುವಟಿಕೆಯಲ್ಲಿ ಸೇನೆಗೆ ನೆರವು ನೀಡಬೇಕಿದೆ ಎಂದು ಲೆಫ್ಟಿನಂಟ್ ಜನರಲ್ ಕೆಜಿಎಸ್ ಧಿಲ್ಲೋನ್ ಮನವಿ ಮಾಡಿದ್ದಾರೆ.

ಪುಲ್ವಾಮಾ ದಾಳಿ ನಡೆದ 100 ಗಂಟೆಯೊಳಗೆ ಕಣಿವೆಯಲ್ಲಿ ಸೇನೆಯು ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಗುಪ್ತಚರ ಸಂಸ್ಥೆಗಳ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ. ಇದರಿಂದ ಕಣಿವೆ ರಾಜ್ಯದಲ್ಲಿ ಜೈಷ್-ಎ-ಮೊಹಮದ್​ಗೆ ನಾಯಕತ್ವವೇ ಇಲ್ಲದಂತಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ದೇಶದ ಯಾವುದೇ ಮೂಲೆಯಲ್ಲಿನ ಕಾಶ್ಮೀರಿಗಳ ನೆರವಿಗೆ ಸೇನೆ ಬದ್ಧವಾಗಿದ್ದು, 14411 ಸಹಾಯವಾಣಿಗೆ ಕರೆ ಮಾಡಿದರೆ ಸೇನೆ ರಕ್ಷಣೆಗೆ ನಿಲ್ಲಲಿದೆ. ಯಾವುದೇ ಕಾಶ್ಮೀರಿಗಳು ಭಯಪಡಬೇಕಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago