ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ  ಫಲಿತಾಂಶ ಪ್ರಕಟ : ಸುರೇಶ್ ಕುಮಾರ್ -Vishwanews24

Featured, ರಾಜ್ಯ ನ್ಯೂಸ್

ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ  ಫಲಿತಾಂಶ ಪ್ರಕಟ : ಸುರೇಶ್ ಕುಮಾರ್ -Vishwanews24

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 30ರ ಒಳಗೆ ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು.

ಯಾರಿಗೂ ಅನ್ಯಾಯವಾಗದ ರಿತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಓಂದು ವೇಳೆ ಯಾವುದೇ ವಿದ್ಯಾರ್ಥಿಗೆ ಫಲಿತಾಂಶ ತೃಪ್ತಿಯಾಗದೇ ಇದ್ದಲ್ಲಿ, ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.