Featured

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ

ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್

ಬೆಂಗಳೂರು: ಗೃಹಜ್ಯೋತಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ.

ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ.

ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.

ಯಾರಿಗೆಲ್ಲಾ ಅನ್ವಯ?

ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು ಎಂದು ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

10 hours ago