ಬೆಂಗಳೂರು: ನಗರದ ಕಬ್ಬನ್ ಉದ್ಯಾನವನದಲ್ಲಿ ಸಾಕು ನಾಯಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಜುಲೈ 1ರಿಂದ ಉದ್ಯಾನದಲ್ಲಿ ಸಾಕು ನಾಯಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲು ತೋಟಗಾರಿಕೆ ಇಲಾಖೆ ತೀರ್ಮಾನಿಸಿದೆ. ಈ ಸಂಬಂಧ ತೋಟಗಾರಿಕೆ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಸಭೆ ನಡೆಸಿದ್ದು, ಮತ್ತೊಂದು ಸಭೆ ನಡೆಸಿ ಕಬ್ಬನ್ ಉದ್ಯಾನದಲ್ಲಿ ಸಾಕು ನಾಯಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲು ನಿರ್ಧರಿಸಲಾಗಿದೆ.
ಸಾಕು ನಾಯಿಗಳಿಂದ ಉದ್ಯಾನದಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತ ಪಡಿಸಿ, ಈ ಸಂಬಂಧ ಮಾರ್ಗಸೂಚಿಗಳನ್ನು ರಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ, ಸಾಕು ನಾಯಿಗಳನ್ನು ಉದ್ಯಾನ ಪ್ರವೇಶಕ್ಕೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು.
ಮಾರ್ಗಸೂಚಿಗಳ ಫಲಕಗಳನ್ನು ಎಲ್ಲ ದ್ವಾರಗಳಲ್ಲಿ ಅಳವಡಿಸಿತ್ತು. ಈ ಸಂಬಂಧ ಭದ್ರತಾ ಸಿಬ್ಬಂದಿಯಿಂದ ನಾಯಿ ಮಾಲಿಕರಿಗೆ ಸೂಚನೆ ನೀಡುತ್ತಿದ್ದರೂ, ಪ್ರಯೋಜನವಾಗಿರಲಿಲ್ಲ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೆ, ಶ್ವಾನಪ್ರಿಯರು ತಮ್ಮ ನಾಯಿಗಳನ್ನು ಹಿಡಿದಿಟ್ಟುಕೊಳ್ಳುವುದು, ಅವುಗಳಿಂದ ಉಂಟಾದ ತ್ಯಾಜ್ಯವನ್ನು ಸ್ವಚ್ಛಗೊಳಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದರಿಂದ ಇತರೆ ವಾಯು ವಿಹಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…