Featured

ಜುಲೈ.1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ : ನಾಳೆಯಿಂದ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಆದೇಶ -Vishwanews24

ಜುಲೈ.1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ : ನಾಳೆಯಿಂದ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಆದೇಶ -Vishwanews24

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವಂತ ಜಿಲ್ಲೆಗಳು ಹೊರತಾಗಿ, ಉಳಿದ ಜಿಲ್ಲೆಗಳ ಶಿಕ್ಷಕರು ಜುಲೈ 1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ ) ಇವರಿಗೆ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ದಿನಾಂಕ 01-07-2021 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ಪ್ರಾರಂಭಿಸಲು ಹಾಗೂ ಮಕ್ಕಳ ಕಲಿಕೆಗೆ ಪೂರ್ವ ತಯಾರಿಯನ್ನು ಶಿಕ್ಷಕರು ದಿನಾಂಕ 15-06-2021ರಿಂದ ಪ್ರಾರಂಭಿಸಲು ಈಗಾಗಲೇ ತಿಳಿಸಲಾಗಿದೆ.

ಕೋವಿಡ್-19ರ ಹಿನ್ನಲೆಯಲ್ಲಿ ವಿಧಿಸಲಾಗಿರುವ ಕಠಿಣ ನಿರ್ಬಂಧಗಳನ್ನು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ(ಶೈಕ್ಷಣಿಕ ಜಿಲ್ಲೆ) ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದುವರೆಸಲಾಗಿದ್ದು, ಸದರಿ ಜಿಲ್ಲೆಗಳ ಎಲ್ಲಾ ಶಿಕ್ಷಕರು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮತ್ತು ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದ ಪೂರ್ವ ತಯಾರಿ ಕಾರ್ಯಗಳನ್ನು ಮಾಡಿಕೊಳ್ಳಲು ತಮ್ಮ ಮನೆಗಳಿಂದ ಕಾರ್ಯನಿರ್ವಹಿಸಲು ಕೋರಿದೆ. ಕಠಿಣ ನಿರ್ಬಂಧಗಳನ್ನು ಭಾಗಶಹ ತೆರವುಗೊಳಿಸಿದ ತಕ್ಷಣವೇ ಶಿಕ್ಷಕರು ಶಾಲೆಗಳಿಗೆ ತೆರಳಿ, ತೊಡಗಿಸಿಕೊಳ್ಳತಕ್ಕದ್ದು.

ಸದರಿ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿನ ಎಲ್ಲಾ ಶಾಲಾ ಶಿಕ್ಷಕರು ದಿನಾಂಕ 15-06-2021ರಿಂದ ಕಾರ್ಯಪ್ರವೃತ್ತರಾಗಲು ಕೋರಿದೆ. ಈ ಎಲ್ಲಾ ಅಂಶಗಳ ಕುರಿತು ಅನುಪಾಲನೆ ಮಾಡಲು ಎಲ್ಲಾ ಉಪ ನಿರ್ದೇಶಕರು(ಆಡಳಿತ) ಮತ್ತು (ಅಭಿವೃದ್ಧಿ)ರವರಿಗೆ ಸೂಚಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

7 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

8 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

8 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

8 hours ago