Featured

ಜುಲೈ 27ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ – vishwanews24

ಜುಲೈ 27ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು/ಉಡುಪಿ, : ಜುಲೈ 27ರವರೆಗೆ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಎಚ್ಚರಿಕೆ ನೀಡಿದೆ.

ನದಿಗಳು, ನೀರಿರುವ ಪ್ರದೇಶ ಮತ್ತು ಸಮುದ್ರದಿಂದ ದೂರವಿರುವಂತೆ ಅಧಿಕಾರಿಗಳು ಸಾರ್ವಜನಿಕರು, ಪ್ರವಾಸಿಗರು ಮತ್ತು ಮೀನುಗಾರರಿಗೆ ಸೂಚಿಸಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಮತ್ತು ಕಾರ್ಮಿಕರು ಮಳೆ, ಗಾಳಿ ಅಥವಾ ಸಿಡಿಲು ಇರುವಾಗ ಹೊರಗೆ ಹೋಗಬಾರದು ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಅಥವಾ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸಲಹೆ ನೀಡಲಾಗಿದೆ.

ಅಪಾಯಕಾರಿ ಮರಗಳು ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಮತ್ತು ಮುರಿದ ವಿದ್ಯುತ್ ತಂತಿಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ದುರ್ಬಲ ಅಥವಾ ಹಳೆಯ ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು. ಕಟ್ಟಡಗಳ ಮೇಲಿರುವ ಅಪಾಯಕಾರಿ ಕೊಂಬೆಗಳು ಇದ್ದಲ್ಲಿ ಅದನ್ನು ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.

ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಅಂತಹ ಪ್ರದೇಶಗಳ ನಿವಾಸಿಗಳು ಸ್ಥಳೀಯ ತಹಶೀಲ್ದಾರ್ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಪರಿಹಾರ ಕೇಂದ್ರಗಳಲ್ಲಿ ಮುಂಚಿತವಾಗಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

14 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago