ಜುಲೈ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

Featured, ಉಡುಪಿ

ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು:ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.

UDUPI : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪದಿಂದ ತಂದೆ ದೋಷಮುಕ್ತ – vishwanews24

Leave a Reply