Featured

ಜು.12ರಿಂದ ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ ಸೇವೆ ಪುನರಾರಂಭ -Vishwanews24

ಜು.12ರಿಂದ ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ ಸೇವೆ ಪುನರಾರಂಭ -Vishwanews24

ಬೆಂಗಳೂರು : ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜು.12ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಸಾರಿಗೆಗಳ ಕಾರ್ಯಾಚರಣೆ ಪುನರಾರಂಭಿಸಲಾಗುತ್ತಿದೆ.

ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳಂತೆ ನಿಗಮದ ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು. ವಿದ್ಯಾರ್ಥಿಗಳು, ಶಿಕ್ಷಣ, ವ್ಯವಹಾರ ಮತ್ತು ಇತರೆ ಕಾರಣಗಳಿಗಾಗಿ ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣಿಸುವ ಸಾರ್ವಜನಿಕರು 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪರೀಕ್ಷಾ ವರದಿ ಹೊಂದಿರತಕ್ಕದ್ದು.

ಪ್ರಯಾಣಿಕರು ಕಡ್ಡಾಯವಾಗಿ ಮುಖ ಗವಸು ಧರಿಸುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಕೋರಲಾಗಿದೆ.

ಮುಂಗಡ ಆಸನಗಳನ್ನು ksrtc.karnataka.gov.in/www.ksrtc.in ವೆಬ್ ಸೈಟ್ ಮತ್ತು ನಿಗಮದ/ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಪ್ರಯಾಣಿಕರು ಸದರಿ ಸೌಲಭ್ಯದ ಸದುಪಯೋಗ ಪಡೆಯಲು ಕೋರಲಾಗಿದೆ. ಹೆಚ್ಚುವರಿ ಮಾಹಿತಿಗಾಗಿ ಕರಾರಸಾ ನಿಗಮದ ಕಾಲ್‌ಸೆಂಟರ್ ದೂರವಾಣಿ ಸಂಖ್ಯೆ 080-26252625 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago