Featured

ಜು.14 ರಂದು ಕೋವಿಡ್- 19 ಎರಡನೇ ಡೋಸ್ ಲಸಿಕೆ ಲಭ್ಯ -Vishwanews24

ಜು.14 ರಂದು ಕೋವಿಡ್- 19 ಎರಡನೇ ಡೋಸ್ ಲಸಿಕೆ ಲಭ್ಯ -Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 14 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆಯನ್ನು ಬೆಳಗ್ಗೆ 11 ಗಂಟೆಯಿoದ ಸಂಜೆ 4.30 ರ ವರೆಗೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

6 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

7 hours ago