Featured

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ

ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ “ಪರ್ಬದ ಲೇಸ್” ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ, ಉದ್ಯಮಿ ಹಾಗೂ ಸಮಾಜ ಸೇವಕ ಶಶಿಧರ್ ಶೆಟ್ಟಿ ಬರೋಡಾ, ಕರ್ನಾಟಕ ಕುಸ್ತಿ ಅಕಾಡೆಮಿ ಅಧ್ಯಕ್ಷ ಗುಣರಂಜನ್ ಶೆಟ್ಟಿ , ಬಿಬಿಎಂಪಿಯ ಮಾಜಿ ಸದಸ್ಯರಾದ ಉಮೇಶ್ ಶೆಟ್ಟಿ ಮತ್ತು ರಾಜೇಂದ್ರ ಕುಮಾರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತುಳು ಪರ್ಬ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಸಂವಾದ ನಡೆಯಲಿದೆ. ತುಳುನಾಡಿನ ಸಾಂಸ್ಕøತಿಕ ವೈಭವ ಮೇಳೈಸಲಿದೆ.
ತುಳುನಾಡಿನ ಜಾನಪದ ಪದಗಳ “ಸಂಪೊಲಿಗೆ” ಪುಸ್ತಕ ಹಾಗೂ “ಮೋಕ್ಷ” ತುಳು ಭಜನೆ ವಿಡಿಯೋ ಬಿಡುಗಡೆಯಾಗಲಿದೆ. ಸಂಜೆ ನಾಲ್ಕು ಗಂಟೆಯಿಂದ ಭಕ್ತಿ ಪ್ರಧಾನ “ದೈವರಾಜೆ ಶ್ರೀ ಬಬ್ಬುಸ್ವಾಮಿ” ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ತುಳುವೆರೆ ಚಾವಡಿ ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ತುಳುನಾಡು ಸಿರಿ ಪ್ರಶಸ್ತಿಯನ್ನು ಸಮಾಜ ಸೇವಕರಾದ ಕೋಡಿಬೆಟ್ಟು ಅರುಣ್ ಶೆಟ್ಟಿ ಹಾಗೂ ಈಶ್ವರ್ ಮಲ್ಪೆ ಮತ್ತು ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವಿಜಯಲಕ್ಷ್ಮಿ ಕಟೀಲ್ ಅವರಿಗೆ ನೀಡಿ ಸನ್ಮಾನಿಸಲಾಗುವುದು.

ಹಾಗೇ ಪ್ರತಿಷ್ಠಿತ ದಿ. ಡಿ.ಕೆ. ಚೌಟ ಪ್ರಶಸ್ತಿಯನ್ನು ಕೃಷಿ ಕ್ಷೇತ್ರದ ಸಾಧಕ ಕಡಮಜಲ್ ಶುಭಾಷ್ ರೈ ಹಾಗೂ ದಿ. ವಿಜಯ್ ಕುಮಾರ್ ಕುಲಶೇಕರ ನೆನಪಿನ ಪ್ರಶಸ್ತಿಯನ್ನು ತುಳು ಸೇವೆಗೆ ಶ್ರಮಿಸಿದ್ದ ಜಿ.ವಿ.ಎಸ್. ಉಳ್ಳಾಲ್ ಅವರಿಗೆ ನೀಡಿ ಗೌರವಿಸಲಾಗುವುದು.

ಚಿತ್ರಕಲೆಯಲ್ಲಿ ಅಪ್ರತಿಮ ಸಾಧನೆ ಮಾಡಿರುವ ಗಣೇಶ್ ಪಂಜಿಮಾರ್ ಮತ್ತು ಕುಸುಮಾ ಪಂಜಿಮಾರ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಬೆಂಗಳೂರಿನ ತುಳುವೆರೆ ಚಾವಡಿಯ ಗೌರವಾಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ, ಅಧ್ಯಕರಾದ ಮುಂಡಾಲುಗುತ್ತು ವಿಶು ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ರಘುವೀರ್ ನಾಯ್ಕ್ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 30ಕ್ಕೂ ಹೆಚ್ಚು ತುಳು ಭಾಷಿಗರ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago