ಕುಂದಾಪುರ: ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರದವರೆಗೆ ಸಂಚರಿಸಲಿದೆ. ಬಳಿಕ ಬೆಂಗಳೂರಿಗೆ ಮರಳಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಾರಾಂತ್ಯದ ವಿಶೇಷ ರೈಲಿಗಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಚಿವರು ತುರ್ತು ಸ್ಪಂದಿಸಿ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಇಂಥದ್ದೊಂದು ರೈಲಿನ ಅಗತ್ಯದ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತ್ತು.
ಈ ರೈಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಜು.26ರ ಮಧ್ಯರಾತ್ರಿ 12.30ಕ್ಕೆ ಹೊರಟು ಜು.27ರ ಬೆಳಗ್ಗೆ 11.30ಕ್ಕೆ ಉಡುಪಿ, 12.15ಕ್ಕೆ ಕುಂದಾಪುರ ಹಾಗೂ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಜು. 27ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಕುಂದಾಪುರ, ಉಡುಪಿ ಮಾರ್ಗವಾಗಿ ಪಡೀಲ್ ಬೈಪಾಸ್ ಮೂಲಕ ಜು.28ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ.
ಜು.28ರ ಮಧ್ಯರಾತ್ರಿ 2.30ಕ್ಕೆ ಮತ್ತೆ ಬೆಂಗಳೂರಿನಿಂದ ಕಾರವಾರಕ್ಕೆ ಹೊರಡಲಿದೆ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.. ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯದಲ್ಲಿ ಇದೇ…
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…
ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…
ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…