ಜು.3: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಏಕರೂಪ ತಂತ್ರಾಂಶ ಅಳವಡಿಕೆ ಉದ್ಘಾಟನೆ: vishwanews24

Featured, ರಾಜ್ಯ ನ್ಯೂಸ್

ಮಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆ, ಟ್ಯಾಬ್ ಬ್ಯಾಂಕಿಂಗ್, ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್ ಹಾಗೂ ವಿಡಿಯೊ ಕಾನ್ಫರೆನ್ಸ್‌ಗಳ ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಸಮಾರಂಭವು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಶ್ರಯದಲ್ಲಿ ಜುಲೈ 3ರಂದು ಬೆಳಿಗ್ಗೆ 10ಕ್ಕೆ ನಗರದಲ್ಲಿರುವ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ‘ಏಕರೂಪ ತಂತ್ರಾಂಶ ಅಳವಡಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಗೌರವಧನ ವಿತರಣೆ’ಯನ್ನು  ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೆರವೇರಿಸುವರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ಟ್ಯಾಬ್ ಬ್ಯಾಂಕಿಂಗ್’ ಉದ್ಘಾಟಿಸುವರು. ‘ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್’ ಅನ್ನು ಸಂಸದ ನಳಿನ್‍ಕುಮಾರ್ ಕಟೀಲ್ ನೆರವೇರಿಸುವರು. ವಿಡಿಯೊ ಕಾನ್ಫರೆನ್ಸ್‌ಗೆ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಚಾಲನೆ ನೀಡುವರು’ ಎಂದರು.ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಯು.ಟಿ. ಖಾದರ್, ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಭಾಗವಹಿಸುವರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ಟ್ಯಾಬ್ ಬ್ಯಾಂಕಿಂಗ್’ ಉದ್ಘಾಟಿಸುವರು. ‘ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್’ ಅನ್ನು ಸಂಸದ ನಳಿನ್‍ಕುಮಾರ್ ಕಟೀಲ್ ನೆರವೇರಿಸುವರು.