ಮಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆ, ಟ್ಯಾಬ್ ಬ್ಯಾಂಕಿಂಗ್, ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್ ಹಾಗೂ ವಿಡಿಯೊ ಕಾನ್ಫರೆನ್ಸ್‌ಗಳ ಉದ್ಘಾಟನೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಸಮಾರಂಭವು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಶ್ರಯದಲ್ಲಿ ಜುಲೈ 3ರಂದು ಬೆಳಿಗ್ಗೆ 10ಕ್ಕೆ ನಗರದಲ್ಲಿರುವ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ‘ಏಕರೂಪ ತಂತ್ರಾಂಶ ಅಳವಡಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಗೌರವಧನ ವಿತರಣೆ’ಯನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೆರವೇರಿಸುವರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ಟ್ಯಾಬ್ ಬ್ಯಾಂಕಿಂಗ್’ ಉದ್ಘಾಟಿಸುವರು. ‘ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್’ ಅನ್ನು ಸಂಸದ ನಳಿನ್‍ಕುಮಾರ್ ಕಟೀಲ್ ನೆರವೇರಿಸುವರು. ವಿಡಿಯೊ ಕಾನ್ಫರೆನ್ಸ್‌ಗೆ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಚಾಲನೆ ನೀಡುವರು’ ಎಂದರು.ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಯು.ಟಿ. ಖಾದರ್, ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಭಾಗವಹಿಸುವರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ಟ್ಯಾಬ್ ಬ್ಯಾಂಕಿಂಗ್’ ಉದ್ಘಾಟಿಸುವರು. ‘ಎಸ್‍ಸಿಡಿಸಿಸಿ ಬ್ಯಾಂಕ್ ಆ್ಯಪ್’ ಅನ್ನು ಸಂಸದ ನಳಿನ್‍ಕುಮಾರ್ ಕಟೀಲ್ ನೆರವೇರಿಸುವರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…