Featured

ಜು.31ರವರೆಗೆ ‘ಒಂದು ದೇಶ, ಒಂದು ಪಡಿತರ’ ಯೋಜನೆ ಮುಂದುವರಿಸಲು ಸುಪ್ರೀಂ ಆದೇಶ -Vishwanews24

ಜು.31ರವರೆಗೆ ‘ಒಂದು ದೇಶ, ಒಂದು ಪಡಿತರ’ ಯೋಜನೆ ಮುಂದುವರಿಸಲು ಸುಪ್ರೀಂ ಆದೇಶ -Vishwanews24

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶದ ಎಲ್ಲ ಬಡವರ್ಗದವರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಯೋಜನೆಯನ್ನು ದೇಶದಾದ್ಯಂತ ಜುಲೈ 31ರವರೆಗೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಕೊರೊನಾದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ಫ್ಯೂ ಮತ್ತು ಲಾಕ್‌ಡೌನ್‌ನಿಂದಾಗಿ ವಲಸೆ ಕಾರ್ಮಿಕರಿಗೆ ಆಹಾರ ಭದ್ರತೆ, ಮತ್ತಿತರ ಸೌಲಭ್ಯಗಳನ್ನು ನೀಡಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ, ಈ ನಿರ್ದೇಶನಗಳನ್ನು ನೀಡಿದೆ ಎಂದು ವರದಿಯಾಗಿದೆ.

ಇನ್ನು ಜುಲೈ 31ರ ಗಡುವಿನೊಳಗೆ ಈ ಯೋಜನೆಗಳ ಪ್ರಯೋಜನ ಪಡೆಯುವ ದೃಷ್ಟಿಯಿಂದ ಅಸಂಘಟಿತ ಕಾರ್ಮಿಕರ ವಲಯದವರ ನೋಂದಣಿ ಮಾಡಿಸಿಕೊಳ್ಳುವುದಕ್ಕಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರದ ನೆರವಿನೊಂದಿಗೆ ಒಂದು ಜಾಲತಾಣ ಅಭಿವೃದ್ಧಿಪಡಿಸುವಂತೆಯೂ ನ್ಯಾಯಪೀಠ ಕೇಂದ್ರಕ್ಕೆ ನಿರ್ದೇಶನ ನೀಡಿತು.

“ಒಂದು ದೇಶ, ಒಂದು ಪಡಿತರ ಚೀಟಿ” ಯೋಜನೆಯಡಿ, ವಲಸೆ ಕಾರ್ಮಿಕರು ಕೆಲಸಕ್ಕಾಗಿ ಹೊರ ರಾಜ್ಯಗಳಿಗೆ ಹೋಗಿರುವ ಸಂದರ್ಭದಲ್ಲಿ ಕೆಲಸ ಮಾಡುವ ಸ್ಥಳದಲ್ಲೇ ಉಚಿತ ಪಡಿತರ ಪಡೆಯಬಹುದು. ಇಲ್ಲಿ ಪಡಿತರ ಚೀಟಿ ನೋಂದಣಿ ಮಾಡಿಸದಿದ್ದರೂ ಕಾರ್ಮಿಕರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ನ್ಯಾಯಪೀಠ ತಿಳಿಸಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago